ದಾನಿಶ್ ಅಲಿ ಬಿಎಸ್ಪಿ ಸೇರ್ಪಡೆ ಬಗ್ಗೆ ಸಿಎಂ ಕುಮಾರಸ್ವಾಮಿ ಪ್ರತಿಕ್ರಿಯೆ

Update: 2019-03-16 16:01 GMT

ಬೆಂಗಳೂರು, ಮಾ.16: ಜೆಡಿಎಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ದಾನಿಶ್ ಅಲಿ, ನನ್ನ ಹಾಗೂ ನಮ್ಮ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಜೊತೆ ಸಮಾಲೋಚನೆ ಮಾಡಿದ ಬಳಿಕವೇ ಬಿಎಸ್ಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.

ಈ ಸಂಬಂಧ ಟ್ವಿಟ್ ಮಾಡಿರುವ ಅವರು, ಎರಡು ರಾಜಕೀಯ ಪಕ್ಷಗಳ ನಡುವಿನ ರಾಜಕೀಯ ಒಪ್ಪಂದ ಇದಾಗಿದೆ. ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಹಾಗೂ ಬಿಎಸ್ಪಿ ಪಕ್ಷಗಳು ಹೆಚ್ಚಿನ ಸ್ಥಾನಗಳನ್ನು ಗೆಲ್ಲುವ ಉದ್ದೇಶದಿಂದ ಚಿಂತನಾಶೀಲ ರಾಜಕೀಯ ನಿರ್ಧಾರವನ್ನು ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News