ಲೋಕಸಭಾ ಚುನಾವಣಾ ಹಿನ್ನೆಲೆ: 1.16 ಕೋಟಿ ನಗದು ವಶ; 517 ಪ್ರಕರಣಗಳು ದಾಖಲು

Update: 2019-03-16 15:44 GMT
ಸಾಂದರ್ಭಿಕ ಚಿತ್ರ

ಬೆಂಗಳೂರು, ಮಾ.16: ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಶನಿವಾರದಂದು 1.16 ಕೋಟಿ ನಗದು ವಶಪಡಿಸಿಕೊಂಡು, 517 ಪ್ರಕರಣಗಳನ್ನು ದಾಖಲಿಸಿಕೊಳ್ಳಲಾಗಿದೆ. ಸ್ಟಾಟಿಕ್ ಸರ್ವೆಲೆನ್ಸ್ ತಂಡಗಳು 76.25 ಲಕ್ಷ ನಗದು, 11.82 ಲಕ್ಷ ಮೌಲ್ಯದ ಚಿನ್ನ-ಬೆಳ್ಳಿ, 14.10 ಲಕ್ಷ ಮೌಲ್ಯದ ವಾಹನಗಳು, 5.35 ಮೌಲ್ಯದ ಮತ್ತಿತರೆ ವಸ್ತುಗಳನ್ನು ವಶಪಡಿಸಿಕೊಂಡಿದೆ. 

ಫ್ಲೈಯಿಂಗ್ ಸ್ಕ್ವಾಡ್ ತಂಡಗಳು 40.54 ಲಕ್ಷದ ನಗದು, 4 ಲಕ್ಷ ಮೌಲ್ಯದ ಚಿನ್ನ-ಬೆಳ್ಳಿ ಹಾಗೂ 51.39 ಲಕ್ಷ ಮೌಲ್ಯದ ವಾಹನಗಳು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ. ಪೊಲೀಸ್ ಪ್ರಾಧಿಕಾರಗಳು 5,990 ನಗದು, 1.66 ಮೌಲ್ಯದ ಮದ್ಯ, 8.65 ಲಕ್ಷ ಮೌಲ್ಯದ ವಾಹನಗಳು, 2.50 ಲಕ್ಷ ಮೌಲ್ಯದ ಮತ್ತಿತರೆ ವಸ್ತುಗಳನ್ನು ವಶಪಡಿಸಿಕೊಂಡಿದೆ.

ಅಬಕಾರಿ ಇಲಾಖೆಯು ಒಂದು ಕೋಟಿಗೂ ಅಧಿಕ ಮೌಲ್ಯದ ಮದ್ಯ ವಶಪಡಿಸಿಕೊಂಡಿದ್ದು, 517 ಪ್ರಕರಣಗಳನ್ನು ದಾಖಲಿಸಿಕೊಳ್ಳಲಾಗಿದೆ. ಮದ್ಯದ ಪರವಾನಿಗೆ ಉಲ್ಲಂಘಿಸಿದ 413 ಅಪರಾಧ ಪ್ರಕರಣಗಳನ್ನು ದಾಖಲಿಸಲಾಗಿದೆ. 63265 ಪರವಾನಿಗೆ ಹೊಂದಿದ ಶಸ್ತ್ರಾಸ್ತ್ರಗಳನ್ನು ಜಮೆ ಮಾಡಿಸಿಕೊಳ್ಳಲಾಗಿದೆ. 298 ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. 9 ಪರವಾನಿಗೆಯನ್ನು ರದ್ದು ಮಾಡಲಾಗಿದೆ. ಸಿಆರ್‌ಪಿಸಿ ಕಾಯ್ದೆಯಡಿ 32844 ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News