ಜಮ್ಮುಕಾಶ್ಮೀರ: ಮಹಿಳಾ ಪೊಲೀಸ್ ಅಧಿಕಾರಿಯ ಗುಂಡಿಕ್ಕಿ ಹತ್ಯೆ

Update: 2019-03-16 17:17 GMT

ಶ್ರೀನಗರ, ಮಾ.16: ಜಮ್ಮು-ಕಾಶ್ಮೀರದ ಶೋಫಿಯಾನ್ ಜಿಲ್ಲೆಯಲ್ಲಿ ವಿಶೇಷ ಪೊಲೀಸ್ ಅಧಿಕಾರಿಯೊಬ್ಬರನ್ನು ಅವರ ಮನೆಯಲ್ಲೇ ಶಂಕಿತ ಉಗ್ರರು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಖುಷ್ಬೂ ಜಾನ್ ಮೃತಪಟ್ಟ ಅಧಿಕಾರಿ. ಇವರು ವೆಹಿಲ್ ಪ್ರದೇಶದಲ್ಲಿರುವ ತಮ್ಮ ಮನೆಯಲ್ಲಿ ಇದ್ದಾಗ ಏಕಾಏಕಿ ಮನೆಗೆ ನುಗ್ಗಿದ್ದ ಉಗ್ರರು ಅವರ ಮೇಲೆ ಗುಂಡು ಹಾರಿಸಿ ಪರಾರಿಯಾದರು. ತೀವ್ರವಾಗಿ ಗಾಯಗೊಂಡ ಅವರನ್ನು ಆಸ್ಪತ್ರೆಗೆ ಕೊಂಡೊಯ್ಯುತ್ತಿದ್ದಾಗ ಅವರು ಕೊನೆಯುಸಿರೆಳೆದರು ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಕರಣ ದಾಖಲಿಸಲಾಗಿದ್ದು ಇದೀಗ ಭದ್ರತಾ ಪಡೆಗಳು ಈ ಪ್ರದೇಶವನ್ನು ಸುತ್ತುವರಿದಿದ್ದು ದುಷ್ಕರ್ಮಿಗಳ ಪತ್ತೆ ಕಾರ್ಯಾಚರಣೆ ನಡೆಸುತ್ತಿದ್ದಾರೆ ಎಂದು ವರದಿಯಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News