ಗೋವಾದಲ್ಲಿ ಸರಕಾರ ರಚನೆಗೆ ರಾಜ್ಯಪಾಲರಿಗೆ ಪತ್ರ ಬರೆದ ಕಾಂಗ್ರೆಸ್

Update: 2019-03-16 18:21 GMT

ಪಣಜಿ, ಮಾ. 16: ಗೋವಾದ ಮುಖ್ಯಮಂತ್ರಿ ಮನೋಹರ್ ಪಾರಿಕ್ಕರ್ ಆರೋಗ್ಯದ ಬಗ್ಗೆ ಕಳವಳ ವ್ಯಕ್ತವಾದ ನಡುವೆ, ಕಾಂಗ್ರೆಸ್ ಗೋವಾದಲ್ಲಿ ಸರಕಾರ ರಚಿಸಲು ಅವಕಾಶ ನೀಡುವಂತೆ ಕೋರಿದೆ.

ಪ್ರತಿಪಕ್ಷದ ನಾಯಕ ಚಂದ್ರಕಾಂತ್ ಕಾವ್ಲೇಕರ್ ಗೋವಾ ರಾಜ್ಯಪಾಲೆ ಮೃದುಲಾ ಸಿನ್ಹಾ ಅವರಿಗೆ ಬರೆದ ಪತ್ರದಲ್ಲಿ ಬಿಜೆಪಿ ನೇತೃತ್ವದ ಮೈತ್ರಿ ಸರಕಾರ ಅಲ್ಪ ಮತದಲ್ಲಿದೆ ಹಾಗೂ ಅದರ ಸಂಖ್ಯೆ ಇಳಿಕೆಯಾಗುತ್ತಿದೆ ಎಂದು ಹೇಳಿದ್ದಾರೆ. ಬಿಜೆಪಿ ಸರಕಾರವನ್ನು ವಜಾಗೊಳಿಸುವಂತೆ ಹಾಗೂ ರಾಜ್ಯ ವಿಧಾನ ಸಭೆಯ ಏಕೈಕ ಅತಿ ದೊಡ್ಡ ಪಕ್ಷವಾಗಿರುವ ಕಾಂಗ್ರೆಸ್‌ಗೆ ಸರಕಾರ ರಚಿಸಲು ಆಹ್ವಾನ ನೀಡುವಂತೆ ಅವರು ಆಗ್ರಹಿಸಿದ್ದಾರೆ.

ಬಿಜೆಪಿ ಶಾಸಕ ಫ್ರಾನ್ಸಿಸ್ ಡಿ’ಸೋಜಾ ನಿಧನರಾದ ಬಳಿಕ ಮನೋಹರ್ ಪಾರಿಕ್ಕರ್ ಅವರ ನಾಯಕತ್ವದಲ್ಲಿ ಬಿಜೆಪಿ ನೇತೃತ್ವದ ಬಿಜೆಪಿ ಸರಕಾರ ಜನರ ನಂಬಿಕೆಯನ್ನು ಕಳೆದುಕೊಂಡಿದೆ. ಅಲ್ಲದೆ ವಿಧಾನ ಸಭೆಯಲ್ಲಿ ಬಹುಮತ ಕಳೆದುಕೊಂಡಿದೆ ಎಂದು ಕಾವ್ಲೇಕರ್ ಹೇಳಿದ್ದಾರೆ.

ಅಲ್ಲದೆ ಬಿಜೆಪಿ ಸ್ಥಾನದ ಸಂಖ್ಯೆ ಇಳಿಕೆಯಾಗುತ್ತಿದೆ ಎಂದು ಹೇಳಿರುವ ಕಾವ್ಲೇಕರ್, ಇಂತಹ ಅಲ್ಪ ಮತದ ಸರಕಾರಕ್ಕೆ ಅಧಿಕಾರ ಮುಂದುವರಿಯಲು ಅವಕಾಶ ನೀಡಬಾರದು ಎಂದಿದ್ದಾರೆ.

ಬಿಜೆಪಿ ನೇತೃತ್ವದ ರಾಜ್ಯ ಸರಕಾರವನ್ನು ವಜಾ ಮಾಡುವ ಹಾಗೂ ವಿಧಾನ ಸಭೆಯ ಏಕೈಕ ಅತಿ ದೊಡ್ಡ ಪ್ರತಿಪಕ್ಷವಾದ ಕಾಂಗ್ರೆಸ್ ಅನ್ನು ಸರಕಾರ ರಚಿಸುವಂತೆ ಆಹ್ವಾನಿಸುವ ಅಧಿಕಾರವನ್ನು ನೀವು ಹೊಂದಿದ್ದೀರಿ ಎಂದು ಕಾವ್ಲೇಕರ್ ಪತ್ರದಲ್ಲಿ ಹೇಳಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News