ಆರೋಗ್ಯದ ಬಗ್ಗೆ ಪ್ರತಿಯೊಬ್ಬರಿಗೂ ಕಾಳಜಿ ಅಗತ್ಯ: ಡಾ.ಕೆ.ವಿ ಚಿದಾನಂದ

Update: 2019-03-17 17:00 GMT

ಪುತ್ತೂರು : ಪ್ರತಿಯೊಬ್ಬರು ತಮ್ಮ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು. ಆಧುನಿಕತೆ ಮುಂದುವರಿದಂತೆ ಪ್ರತಿಯೊಂದು ವಿಚಾರದಲ್ಲೂ ತಜ್ಞ ವೈದ್ಯರಿಂದ ಸೂಕ್ತ ಸಲಹೆ ಚಿಕಿತ್ಸೆಯ ಸೌಲಭ್ಯ ಲಭ್ಯವಿದ್ದು, ನಮ್ಮ ಸಂಸ್ಥೆಯ ವತಿಯಿಂದ ಮೂರು ವಿಭಾಗದಲ್ಲಿ ವೈದ್ಯಕೀಯ ಶಿಬಿರ ನಡೆಯುತ್ತದೆ. ಇದರ ಸದುಪಯೋಗವನ್ನು ಎಲ್ಲರೂ ಪಡೆದುಕೊಳ್ಳಬೇಕು ಎಂದು ಸುಳ್ಯ ಕೆ.ವಿ.ಜಿ ವೈದ್ಯಕೀಯ ಮಹಾವಿದ್ಯಾಲಯದ ವೈದ್ಯಕೀಯ ನಿರ್ದೇಶಕ ಡಾ. ಕೆ.ವಿ. ಚಿದಾನಂದ ಹೇಳಿದರು.

ಅವರು ರವಿವಾರ ಪುತ್ತೂರು ಒಕ್ಕಲಿಗ ಗೌಡ ಸೇವಾ ಸಂಘ ಮತ್ತು ಯುವ ಗೌಡ ಸಂಘದ ನೇತೃತ್ವದಲ್ಲಿ ಒಕ್ಕಲಿಗ ಸ್ವ ಸಹಾಯ ಟ್ರಸ್ಟ್, ಒಕ್ಕಲಿಗ ಮಹಿಳಾ ಗೌಡ ಸಂಘ, ಸುಳ್ಯದ ಕೆ.ವಿ.ಜಿ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆ, ಕೆ.ವಿ.ಜಿ. ದಂತ ಮಹಾವಿದ್ಯಾಲಯ, ಕೆ.ವಿ.ಜಿ. ಆರ್ಯುರ್ವೇದ ಮಹಾವಿದ್ಯಾಲಯ, ಪುತ್ತೂರಿನ ಭಾರತೀಯ ದಂತ ವೈದ್ಯಕೀಯ ಸಂಘ, ರೋಟರಿ ಕ್ಯಾಂಪ್ಕೋ ಬ್ಲಡ್ ಬ್ಯಾಂಕ್ ಸಹಯೋಗದಲ್ಲಿ ಪುತ್ತೂರಿನ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ನಡೆದ ಉಚಿತ ಆರೋಗ್ಯ ತಪಾಸಣೆ ಮತ್ತು ರಕ್ತದಾನ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.

ಆತ್ಯಾಧುನಿಕ ತಂತ್ರಜ್ಞಾನ ಒಳಗೊಂಡಿರುವ ನಮ್ಮ ಸಂಸ್ಥೆಯಲ್ಲಿ ಮುಂದಿನ ದಿನಗಳಲ್ಲಿ ರೇಡಿಯೋ ಥೆರಪಿ ಪ್ರಾರಂಭ ಆಗಲಿದೆ ಎಂದು ಅವರು ತಿಳಿಸಿದರು.  ಅಧ್ಯಕ್ಷತೆ ವಹಿಸಿದ್ದ ತಾಲೂಕು ಒಕ್ಕಲಿಗ ಗೌಡ ಸೇವಾ ಸಂಘದ ಗೌರವಾಧ್ಯಕ್ಷ ಚಿದಾನಂದ ಬೈಲಾಡಿ ಮಾತನಾಡಿ ಸ್ವಚ್ಛ ಭಾರತ್‍ನೊಂದಿಗೆ ಸ್ವಚ್ಚ ಆರೋಗ್ಯ ಕಾಪಾಡುವ ಜವಾಬ್ದಾರಿ ನಮ್ಮಲ್ಲಿ ಇರಬೇಕು ಎಂದರು.

ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಮೆಡಿಕಲ್ ವಿಭಾಗದ ಮುಖ್ಯಸ್ಥ ಡಾ. ಗೋಪಿನಾಥ ಪೈ, ಸಮುದಾಯ ದಂತ ಆರೋಗ್ಯ ವಿಭಾಗದ ನಿರ್ದೇಶಕ ಡಾ.ಶ್ರೀಪ್ರಕಾಶ್, ಒಕ್ಕಲಿಗ ಗೌಡ ಸೇವಾ ಸಂಘದ ಸಲಹಾ ಸಮಿತಿ ಅಧ್ಯಕ್ಷ ಮೋಹನ್ ಗೌಡ ಇಡ್ಯಡ್ಕ ಅವರು ಮಾತನಾಡಿದರು.

ಸುಳ್ಯದ ಆಕಾಡಮಿ ಆಫ್ ಲಿಬರಲ್ ಎಜ್ಯುಕೇಶನ್ ಸಂಸ್ಥೆಯ ನಿರ್ದೇಶಕ ಅಕ್ಷಯ್ ಕೆ.ಸಿ, ರೋಟರಿ ಕ್ಯಾಂಪ್ಕೊ ಬ್ಲಡ್ ಬ್ಯಾಂಕ್‍ನ ವೈದ್ಯಾಧಿಕಾರಿ ಡಾ. ರಾಮಚಂದ್ರ ಭಟ್,  ಒಕ್ಕಲಿಗ ಮಹಿಳಾ ಗೌಡ ಸಂಘದ ಅಧ್ಯಕ್ಷೆ ನೇತ್ರಾವತಿ, ಒಕ್ಕಲಿಗ ಸ್ವಸಹಾಯ ಸಂಘದ ಅಧ್ಯಕ್ಷ ಡಿ.ವಿ.ಮನೋಹರ್, ಒಕ್ಕಲಿಗ ಗೌಡ ಸೇವಾ ಸಂಘದ ಪ್ರಧಾನ ಕಾರ್ಯದರ್ಶಿ ಶ್ರೀಧರ್ ಗೌಡ ಕಣಜಾಲು ಮತ್ತಿತರರು ಉಪಸ್ಥಿತರಿದ್ದರು.

ಯುವ ಒಕ್ಕಲಿಗ ಗೌಡ ಸೇವಾ ಸಂಘದ ಅಧ್ಯಕ್ಷ ರಾಧಾಕೃಷ್ಣ ನಂದಿಲ ಸ್ವಾಗತಿಸಿದರು. ಕಾರ್ಯಕ್ರಮದ ಸಂಯೋಜಕ ಪರಮೇಶ್ವರ ಗೌಡ ವಂದಿಸಿದರು. ಉದಯ ಕುಮಾರ್ ನಿರೂಪಿಸಿದರು.

ಒಕ್ಕಲಿಗ ಗೌಡ ಸೇವಾ ಸಂಘದ ಉಪಾಧ್ಯಕ್ಸ ಸುರೇಶ್ ಗೌಡ, ರವಿ ಮುಂಗ್ಲಿಮನೆ, ಯುವ ಒಕ್ಕಲಿಗ ಗೌಡ ಸೇವಾ ಸಂಘದ ಪ್ರಧಾನ ಕಾರ್ಯದರ್ಶಿ ಜಯಂತ ವೈ ಸವಣೂರು, ಗೌಡ ಸಂಘದ ನಿಕಟಪೂರ್ವ ಪ್ರಧಾನ ಕಾರ್ಯದರ್ಶಿ ಮನೋಹರ್ ಕೆ.ವಿ, ಮಧು ನರಿಯೂರು, ಮಹಿಳಾ ಗೌಡ ಸಂಘದ ಗೌರವಾಧ್ಯಕ್ಷೆ ಗೌರಿ ಹೆಚ್, ಸಂಧ್ಯಾ ರಾಣಿ ವಿವಿಧ ಕಾರ್ಯಕ್ರಮ ನಿರ್ವಹಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News