ಮನೋಹರ್ ಪರಿಕ್ಕರ್ ನಿಧನಕ್ಕೆ ಮುಖ್ಯಮಂತ್ರಿ ಕುಮಾರಸ್ವಾಮಿ ಸಂತಾಪ

Update: 2019-03-17 17:50 GMT

ಬೆಂಗಳೂರು: ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಅವರ ನಿಧನಕ್ಕೆ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ.

ತಮ್ಮ ಸರಳತೆ , ಸಜ್ಜನಿಕೆಯಿಂದ ಜನಪ್ರಿಯರಾಗಿದ್ದ ಅಪರೂಪದ ರಾಜಕಾರಣಿ ಯಾಗಿದ್ದರು ಎಂದು ಮುಖ್ಯಮಂತ್ರಿ ಗಳು ಸ್ಮರಿಸಿದ್ದಾರೆ.

ಪರಿಕ್ಕರ್ ಅವರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಅವರ ಕುಟುಂಬಕ್ಕೆ ಈ ನೋವು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುವುದಾಗಿ ಅವರು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News