ಉಡುಪಿ: ಪ.ಜಾತಿ, ಪ.ಪಂ. ನಿರುದ್ಯೋಗಳಿಗೆ ವೃತ್ತಿಪರ ಕೌಶಲ್ಯಾಭಿವೃದ್ಧಿ ತರಬೇತಿ

Update: 2019-03-18 15:25 GMT

ಉಡುಪಿ, ಮಾ.18: ಮೈಸೂರಿನಲ್ಲಿರುವ ಕರ್ನಾಟಕದ ಏಕೈಕ ಕೇಂದ್ರೀಯ ಪ್ಲಾಸ್ಟಿಕ್ ಇಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಸಂಸ್ಥೆಯಲ್ಲಿ 2018-19ನೇ ಸಾಲಿನ ಉಡುಪಿ ಜಿಲ್ಲೆಯ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡಗಳಿಗೆ ಸೇರಿದ ನಿರುದ್ಯೋಗಿ ಯುವಕ ಯುವತಿಯರಿಗೆ ಉಚಿತ ಊಟ, ವಸತಿ ಹಾಗೂ ಮಾಸಿಕ 500 ರೂ. ಶಿಷ್ಯ ವೇತನ ಸಹಿತ ತರಬೇತಿ ನಂತರ ಉದ್ಯೋಗಾವಕಾಶ ಕಲ್ಪಿಸಿ ಕೊಡಲಾಗುವುದು. ತರಬೇತಿ ಅವಧಿ 6 ತಿಂಗಳಾಗಿದ್ದು, ತರಬೇತಿಗೆ ಕನಿಷ್ಟ ವಿದ್ಯಾರ್ಹತೆ ಎಸೆಸೆಲ್ಸಿ. ಪಿಯುಸಿ, ಐಟಿಐ, ಡಿಪ್ಲೋಮ, ಪದವೀಧರ ಅ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.

ಅಭ್ಯರ್ಥಿಗಳು ನೇರ ಆಯ್ಕೆಗೆ ಮಾ.22ರಂದು ಸಂಜೆ 5:00ಗಂಟೆ ಒಳಗೆ ಸಿಐಪಿಇಟಿ, ಹೆಬ್ಬಾಳ್ ಇಂಡಸ್ಟ್ರಿಯಲ್ ಏರಿಯಾ, ಮೈಸೂರು ಇಲ್ಲಿಗೆ ಅಂಕಪಟ್ಟಿ (ಎಸೆಸೆಲ್ಸಿ, ಪಿಯುಸಿ, ಐಟಿಐ, ಡಿಗ್ರಿ), ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಆಧಾರ್ ಕಾರ್ಡ್, ಪೋಟೋ 5, ಮೂಲ ದಾಖಲಾತಿಗಳೊಂದಿಗೆ ಹಾಜರಾ ಗಬಹುದು. 18ರಿಂದ 35 ವರ್ಷ ವಯೋಮಾನದೊಳಗಿನ ಅ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗೆ ಸಿಐಪಿಇಟಿ, ಹೆಬ್ಬಾಳ್ ಇಂಡಸ್ಟ್ರಿಯಲ್ ಏರಿಯಾ, ಮೈಸೂರು, ದೂರವಾಣಿ ಸಂಖ್ಯೆ:0821-2510618,2511903, ಮೊಬೈಲ್: 9632688884/8762342432/ 9466146001ನ್ನು ಸಂಪರ್ಕಿಸುವಂತೆ ಕೇಂದ್ರೀಯ ಪ್ಲಾಸ್ಟಿಕ್ಸ್ ತಂತ್ರಜ್ಞಾನ ಸಂಸ್ಥೆಯ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News