ರಾಜ್ಯದಲ್ಲಿ ಹಾಜರಾತಿ ಕೊರತೆಯಿಂದ ಎಸೆಸೆಲ್ಸಿ ಪರೀಕ್ಷೆ ವಂಚಿತರಾಗುವ ವಿದ್ಯಾರ್ಥಿಗಳೆಷ್ಟು ಗೊತ್ತೇ ?

Update: 2019-03-18 16:03 GMT

ಬೆಂಗಳೂರು, ಮಾ.18: ರಾಜ್ಯಾದ್ಯಂತ ನಡೆಯಲಿರುವ ಎಸೆಸೆಲ್ಸಿ ಪರೀಕ್ಷೆಗಳಲ್ಲಿ ಈ ಬಾರಿ ಹಾಜರಾತಿ ಕೊರತೆ ಎದುರಿಸುತ್ತಿರುವ 10 ಸಾವಿರ ವಿದ್ಯಾರ್ಥಿಗಳು ಪರೀಕ್ಷೆಯಿಂದ ವಂಚಿತರಾಗಿದ್ದಾರೆ.

ಶಿಕ್ಷಣ ಇಲಾಖೆಯ ಆದೇಶದ ಪ್ರಕಾರ ಪ್ರತಿಯೊಬ್ಬ ವಿದ್ಯಾರ್ಥಿಯೂ ಪರೀಕ್ಷೆಗೆ ಕುಳಿತುಕೊಳ್ಳಲು ಕನಿಷ್ಠ ಶೇ.75 ರಷ್ಟು ಹಾಜರಾತಿ ಅಗತ್ಯವಿದೆ. ಆದರೆ, ಈ ಬಾರಿ ಅದಕ್ಕಿಂತಲೂ ಕಡಿಮೆಯಿರುವ ಸುಮಾರು 10,572 ವಿದ್ಯಾರ್ಥಿಗಳು ಪರೀಕ್ಷೆಯಿಂದ ವಂಚಿತರಾಗುತ್ತಿದ್ದಾರೆ. ಕಳೆದ ವರ್ಷ 13,616 ವಿದ್ಯಾರ್ಥಿಗಳು ಇದೇ ಕಾರಣಕ್ಕೆ ಪರೀಕ್ಷೆಯಿಂದ ಹೊರಗುಳಿದಿದ್ದರು. ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ಈ ವರ್ಷ ಬಂಕ್ ಮಾಡುವ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಾಗಿದೆ.

ಪ್ರತಿಯೊಬ್ಬ ವಿದ್ಯಾರ್ಥಿಗೂ ಅವಕಾಶ: ಪರೀಕ್ಷೆ ಸಮಯ ಬಂದಿದ್ದರೂ ಕೆಲವು ಖಾಸಗಿ ಶಾಲೆಗಳು ಇನ್ನೂ ಮಾನ್ಯತೆ ನವೀಕರಿಸಿಲ್ಲ. ಇಂತಹ ಶಾಲೆಗಳಲ್ಲಿ ಅಂದಾಜು 20 ವಿದ್ಯಾರ್ಥಿಗಳಿದ್ದು, ಈ ವಿದ್ಯಾರ್ಥಿಗಳನ್ನು ಸರಕಾರಿ ಶಾಲೆಗಳಿಗೆ ವರ್ಗಾವಣೆ ಮಾಡಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗುವುದು. ವಿದ್ಯಾರ್ಥಿಗಳು ಯಾವುದೇ ಭಯ ಪಡುವ ಅವಶ್ಯಕತೆ ಇಲ್ಲ ಎಂದು ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ನಿರ್ದೇಶಕಿ ವಿ.ಸುಮಂಗಲಾ ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News