ಮೂಡುಬಿದಿರೆ: ಪಿಯುಸಿ ವಿದ್ಯಾರ್ಥಿನಿ ಆತ್ಮಹತ್ಯೆ

Update: 2019-03-18 16:53 GMT

ಮೂಡುಬಿದಿರೆ, ಮಾ. 18: ಪಿಯುಸಿ ವಿದ್ಯಾರ್ಥಿನಿಯೋರ್ವಳು ತನ್ನ ಹಾಸ್ಟೆಲ್‍ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾದ ಘಟನೆ ಸೋಮವಾರ ಮಧ್ಯಾಹ್ನ ನಡೆದಿದೆ.

ತುಮಕೂರು ಮೂಲದ ಪ್ರೀತಿ (17) ಮೃತ ವಿದ್ಯಾರ್ಥಿನಿ ಎಂದು ಗುರುತಿಸಲಾಗಿದೆ. 

ಈಕೆ ಆಳ್ವಾಸ್ ಪ.ಪೂ.ಕಾಲೇಜಿನ ವಿದ್ಯಾರ್ಥಿನಿ. ಈ ಬಗ್ಗೆ ಇಲ್ಲಿನ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸ್ ಅಧಿಕಾರಿಗಳು ಪ್ರಕರಣದ ಕುರಿತು ಪರಿಶೀಲನೆ ನಡೆಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News