ಡಿಕೆಶಿ ವಿರುದ್ಧದ ತೆರಿಗೆ ವಂಚನೆ ಪ್ರಕರಣ: ಹೈಕೋರ್ಟ್‌ಗೆ ಇಸಿಐಆರ್ ಸಲ್ಲಿಕೆಗೆ ಕಪಿಲ್ ಸಿಬಲ್ ಆಕ್ಷೇಪ

Update: 2019-03-18 17:07 GMT

ಬೆಂಗಳೂರು, ಮಾ.18: ಹೊಸದಿಲ್ಲಿಯ ಫ್ಲಾಟ್‌ಗಳಲ್ಲಿ ಅಕ್ರಮವಾಗಿ ಹಣ ಸಂಗ್ರಹಿಸಿಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಡಿ.ಕೆ.ಶಿವಕುಮಾರ್ ಸೇರಿ ಐವರು ಆರೋಪಿಗಳ ವಿರುದ್ಧ ಜಾರಿ ನಿರ್ದೇಶನಾಲಯವು ಪ್ರಕರಣದ ಮಾಹಿತಿ ವರದಿ(ಇಸಿಐಆರ್)ಯನ್ನು ಹೈಕೋರ್ಟ್‌ಗೆ ಸಲ್ಲಿಸಿದ್ದಕ್ಕೆ ಹಿರಿಯ ನ್ಯಾಯವಾದಿ ಕಪಿಲ್ ಸಿಬಲ್ ಅವರು ಆಕ್ಷೇಪ ವ್ಯಕ್ತಪಡಿಸಿದರು.

ಇಡಿ ಜಾರಿಗೊಳಿಸಿರುವ ಸಮನ್ಸ್ ಪ್ರಶ್ನಿಸಿ ಸಚಿವ ಡಿ.ಕೆ.ಶಿವಕುಮಾರ್ ಸೇರಿ ಐವರು ಸಲ್ಲಿಸಿರುವ ಅರ್ಜಿ ವಿಚಾರಣೆ ಸೋಮವಾರ ನ್ಯಾಯಮೂರ್ತಿ ಅರವಿಂದ್‌ಕುಮಾರ್ ಅವರಿದ್ದ ನ್ಯಾಯಪೀಠದಲ್ಲಿ ನಡೆಯಿತು. ಡಿ.ಕೆ.ಶಿವಕುಮಾರ್ ಪರ ಹಿರಿಯ ನ್ಯಾಯವಾದಿ ಕಪಿಲ್ ಸಿಬಲ್ ಅವರು ವಾದಿಸಿ, ಇಡಿ ಅವರು ಡಿಕೆಶಿ ವಿರುದ್ಧದ ಅಕ್ರಮ ಹಣಕ್ಕೆ ಸಂಬಂಧಪಟ್ಟಂತೆ ಇನ್ನೂ ತನಿಖೆಯನ್ನೇ ಪೂರ್ಣಗೊಳಿಸಿಲ್ಲ. ಆಗಲೇ ಇಡಿ ಅವರು ಹೈಕೋರ್ಟ್‌ಗೆ ಇಸಿಐಆರ್ ಅನ್ನು ಸಲ್ಲಿಸಿದ್ದಾರೆ. ಈ ಸಂದರ್ಭದಲ್ಲಿ ಇಸಿಐಆರ್ ಅನ್ನು ಸಲ್ಲಿಸುವ ಅವಶ್ಯಕತೆಯೆ ಇರಲಿಲ್ಲ ಎಂದು ಪೀಠಕ್ಕೆ ತಿಳಿಸಿದರು. ಕಪಿಲ್ ಸಿಬಲ್ ಅವರು, ಡಿಕೆಶಿ ವಿರುದ್ಧದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅವರು ಮೊದಲು ಪೂರ್ಣವಾಗಿ ತನಿಖೆ ನಡೆಸಲಿ. ಆಮೇಲೆ ಅವರ ವಿರುದ್ಧ ಸಮನ್ಸ್ ಜಾರಿಗೊಳಿಸಲಿ ಎಂದು ಪೀಠಕ್ಕೆ ತಿಳಿಸಿದರು. ಇಡಿ ಪರವಾಗಿ ಹೆಚ್ಚುವರಿ ಸಾಲಿಸಿಟರ್ ಜನರಲ್ ಪ್ರಭುಲಿಂಗ ಕೆ. ನಾವದಗಿ ಹಾಜರಿದ್ದರು. ವಕೀಲರ ವಾದ ಆಲಿಸಿದ ನ್ಯಾಯಪೀಠವು ಅರ್ಜಿ ವಿಚಾರಣೆಯನು್ನ ಮಂಗಳವಾರಕ್ಕೆ ಮುಂದೂಡಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News