ಲೋಕಸಭಾ ಚುನಾವಣೆ: ಮಾ.19ರಿಂದ ನಾಮಪತ್ರ ಸಲ್ಲಿಕೆ

Update: 2019-03-18 17:24 GMT

ಮಂಗಳೂರು, ಮಾ.18: ಲೋಕಸಭಾ ಚುನಾವಣೆಯ ನಾಮಪತ್ರ ಸಲ್ಲಿಕೆ ಮಾ.19ರಿಂದ ಪ್ರಾರಂಭವಾಗಲಿದೆ.

ಅಂದು ಬೆಳಗ್ಗೆ 11ರಿಂದ ಮಧ್ಯಾಹ್ನ 3ರವರೆಗೆ ನಾಮಪತ್ರಗಳನ್ನು ಚುನಾವಣಾಧಿಕಾರಿ, ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಅವರು ಜಿಲ್ಲಾಧಿಕಾರಿ ಕಚೇರಿ ಯಲ್ಲಿ ಸ್ವೀಕರಿಸಲಿದ್ದಾರೆ.

ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ಚುನಾವಣಾ ಅಭ್ಯರ್ಥಿ ಸೇರಿದಂತೆ ಒಟ್ಟು ಐದು ಮಂದಿ ಮಾತ್ರ ಉಪಸ್ಥಿತರಿರಲು ಅವಕಾಶವಿದೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News