ಮೂಡುಬಿದಿರೆ: ಯೆನೆಪೋಯ ತಾಂತ್ರಿಕ ಮಹಾವಿದ್ಯಾಲಯದಲ್ಲಿ ವಾರ್ಷಿಕ ಕ್ರೀಡಾಕೂಟ

Update: 2019-03-19 12:40 GMT

ಮೂಡುಬಿದಿರೆ: ಯೆನೆಪೋಯ ತಾಂತ್ರಿಕ ಮಹಾವಿದ್ಯಾಲಯದ ವಾರ್ಷಿಕ ಕ್ರೀಡಾಕೂಟ ಶನಿವಾರ ಕಾಲೇಜಿನ ಕ್ರೀಡಾಂಗಣದಲ್ಲಿ ನಡೆಯಿತು. 

ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಸ್ಪೋಟ್ಸ್ ವಾಲಿಬಾಲ್ ತಂಡದ ತರಬೇತುದಾರ ನಾರಾಯಣ ಆಳ್ವ ಜಿ. ಕ್ರೀಡಾಕೂಟವನ್ನು ಉದ್ಘಾಟಿಸಿ, ಕ್ರೀಡೆಯು ಮನುಷ್ಯನ ದೈಹಿಕ ಹಾಗೂ ಮಾನಸಿಕ ಸದೃಢತೆಯನ್ನು ಕಾಪಾಡಲು ತುಂಬಾ ಸಹಕಾರಿಯಾದದ್ದು, ಜೀವನದಲ್ಲಿ ಶಿಸ್ತನ್ನು ಅಳವಡಿಸಿಕೊಳ್ಳುವುದರಿಂದ ಮುಂದಿನ ದಿನಗಳಲ್ಲಿ ಬಹಳಷ್ಟು ಉತ್ತಮ ಸಾಧನೆ ಮಾಡಲು ಸಾಧ್ಯವಾಗುತ್ತದೆ ಎಂದರು.

ಕಾಲೇಜಿನ ಪ್ರಾಚಾರ್ಯ ಡಾ.ಆರ್.ಜಿ. ಡಿಸೋಜಾ ಅಧ್ಯಕ್ಷತೆ ವಹಿಸಿದ್ದರು.

ವಿದ್ಯಾರ್ಥಿಗಳಿಗಾಗಿ 100ಮೀ, 200ಮೀ, 800ಮೀ, 1500ಮೀ ಓಟ, ಉದ್ದ ಜಿಗಿತ, ಎತ್ತರ ಜಿಗಿತ, ಟ್ರಿಪಲ್ ಜಂಪ್, ಗುಂಡೆಸೆತ, ಡಿಸ್ಕಸ್ ಎಸೆತ ಸ್ಪರ್ಧೆಗಳು ನಡೆದವು. 

ಪುರುಷರ ವಿಭಾಗದಲ್ಲಿ ಸಾಯಿನಿಕೇತನ್ ಹಾಗೂ ಮಹಿಳೆಯರ ವಿಭಾಗದಲ್ಲಿ ದೀಕ್ಷಾಕುಮಾರಿ ಅತ್ಯುತ್ತಮ ಕ್ರೀಡಾಪಟು ಪ್ರಶಸ್ತಿ ಪಡೆದರು.
ಆಡಳಿತಾಧಿಕಾರಿ ಅಶೋಕ್ ಶೆಟ್ಟಿ, ಕಾಲೇಜಿನ ಶಿಕ್ಷಕ ಹಾಗೂ ಶಿಕ್ಷಕೇತರ ವೃಂದ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ವಿದ್ಯಾರ್ಥಿಗಳ ಕ್ಷೇಮಪಾಲನಾ ಅಧಿಕಾರಿ ಜೀವನ್ ಪಿಂಟೋ ಸ್ವಾಗತಿಸಿ, ಇಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಶನ್ ವಿಭಾಗದ ಪ್ರೀತಿ ನಿರೂಪಿಸಿ, ದೈಹಿಕ ಶಿಕ್ಷಣ ನಿರ್ದೇಶಕ ಲೋಕೇಶ್ ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News