ಕಾರ್ಕಳ: ಮಹಿಳಾ ಸಬಲೀಕರಣ ಬಗ್ಗೆ ಮಾಹಿತಿ ಕಾರ್ಯಕ್ರಮ

Update: 2019-03-19 12:43 GMT

ಕಾರ್ಕಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಪ್ರತಿಭಾ ಜ್ಞಾನವಿಕಾಸ ಕೇಂದ್ರ ಸೂಡ ಮತ್ತು ಜನನಿ ಮಹಿಳಾ ಮಂಡಳಿ ಸೂಡ ಇದರ ಸಂಯುಕ್ತ ಆಶ್ರಯದಲ್ಲಿ ಮಹಿಳಾ ದಿನಾಚರಣೆಯು ಸೂಡ ಸ.ಕಿ.ಪ್ರಾ. ಶಾಲೆಯಲ್ಲಿ ನಡೆಯಿತು. 

ಸಂಪನ್ಮೂಲ ವ್ಯಕ್ತಿ ಬಸ್ರೂರು ಶ್ರೀ ಶಾರದಾ ಕಾಲೇಜಿನ ನಿವೃತ್ತ ಪ್ರಾಂಶುಪಾಲೆ ಚಂದ್ರಪ್ರಭಾ ಹೆಗ್ಡೆ ಸಭಾ ಕಾರ್ಯಕ್ರಮ ಉದ್ಘಾಟಿಸಿ, ಮಹಿಳಾ ಸಬಲೀಕರಣದ ಬಗ್ಗೆ ಮಾಹಿತಿ ನೀಡಿದರು. 

ಬೆಳ್ಮಣ್ಣು ಗ್ರಾ.ಪಂ. ಅಧ್ಯಕ್ಷೆ ವಾರಿಜ ಸಾಲ್ಯಾನ್ ಅಧ್ಯಕ್ಷತೆ ವಹಿಸಿದ್ದರು. ಸೂಡ ಹಾಲು ಉತ್ಪಾದಕ ಮಹಿಳಾ ಸಂಘದ ಅಧ್ಯಕ್ಷೆ ಸ್ಮಿತಾ ಶೆಟ್ಟಿ, ಜ್ಞಾನ ವಿಕಾಸ ತಾಲೂಕು ಸಮನ್ವಯಾಧಿಕಾರಿ ಮಲ್ಲಿಕಾ, ಸರಕಾರಿ ಪ್ರೌಢಶಾಲೆಯ ಸಮಾಜ ಶಿಕ್ಷಕಿ ಮಲ್ಲಿಕಾ ಕೆ.ಅರ್., ಸ.ಕಿ.ಪ್ರಾ.ಶಾಲೆಯ ಮುಖ್ಯ ಶಿಕ್ಷಕಿ ಶಕುಂತಲಾ, ಜನನಿ ಮಹಿಳಾ ಮಂಡಳಿ ಅಧ್ಯಕ್ಷೆ ದೀಪಿಕಾ ಅಶೋಕ್, ಚಲನಚಿತ್ರ ನಟಿ ಶುಭ ಪೂಂಜ ಮತ್ತಿತರರು ಉಪಸ್ಥಿತರಿದ್ದರು. 

ವಿಶೇಷ ಅತಿಥಿಯಾಗಿ ಆಗಮಿಸಿದ ಚಲನಚಿತ್ರ ನಟಿ ಶುಭ ಪೂಂಜ ಅವರನ್ನು ಸನ್ಮಾನಿಸಲಾಯಿತು. ವಿವಿಧ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು. 

ಸೇವಾಪ್ರತಿನಿಧಿ ರಜನಿ ಸ್ವಾಗತಿಸಿದರು. ಸಹನಾ ಕುಂದರ್ ಕಾರ್ಯಕ್ರಮ ನಿರೂಪಿಸಿದರು. ವಿದ್ಯಾಲಕ್ಷ್ಮಿ ಭಟ್ ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News