ಮಾ. 22ರಿಂದ ಪಡುಮಲೆಯಲ್ಲಿ ಆಂಡ್ ನೇರ್ಚೆ, ಧಾರ್ಮಿಕ ಉಪನ್ಯಾಸ ಕಾರ್ಯಕ್ರಮ

Update: 2019-03-19 12:48 GMT

ಪುತ್ತೂರು: ಪಡುಮಲೆ (ಪಮ್ಮಲ) ಜುಮಾ ಮಸೀದಿಯಲ್ಲಿ ನಡೆಸಿಕೊಂಡು ಬರುತ್ತಿರುವ ಆಂಡ್ ನೇರ್ಚೆ, 3 ದಿನಗಳ ಧಾರ್ಮಿಕ ಉಪನ್ಯಾಸ ಹಾಗೂ ಸಾಮೂಹಿಕ ಪ್ರಾರ್ಥನೆ ಮಾ. 22ರಂದು ನಡೆಯಲಿದೆ ಎಂದು ಮಸೀದಿ ಕಮಿಟಿಯ ಪ್ರಧಾನ ಕಾರ್ಯದರ್ಶಿ ಮಹಮ್ಮದ್ ಬಡಗನ್ನೂರು ತಿಳಿಸಿದ್ದಾರೆ.

ಅವರು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಮಾ. 22ರಂದು ಬೆಳಗ್ಗೆ ಜಮಾಅತ್ ಕಮಿಟಿ ಅಧ್ಯಕ್ಷ ಅಲ್‍ ಹಾಜ್ ಕೆ.ಪಿ. ಮುಹಮ್ಮದ್ ಕುಂಞಿ ಮುಸ್ಲಿಯಾರ್ ಅವರು ಧ್ವಜಾರೋಹಣ ನಡೆಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ರಾತ್ರಿ ಕಾಸರಗೋಡು ಖಾಝಿ ಶೈಖುಲ್ ಜಾಮಿಅ: ಶೈಖುನಾ ಅಲಿಕುಟ್ಟಿ ಮುಸ್ಲಿಯಾರ್ ಉದ್ಘಾಟನೆ ಹಾಗೂ ಆಶೀರ್ವಚನ ನೀಡಲಿದ್ದಾರೆ. ಯು.ಕೆ. ಮುಹಮ್ಮದ್ ಹನೀಫ್ ನಿಝಾಮಿ ಮೊಗ್ರಾಲ್ ಮುಖ್ಯ ಪ್ರಭಾಷಣ ನೀಡಲಿದ್ದಾರೆ.

ಮಾ.23ರಂದು ರಾತ್ರಿ ಬೇಕಲ ಮುದರ್ರಿಸ್ ಶಾಫಿ ಬಾಖವಿ ಚಾಲಿಯಂ ಮುಖ್ಯ ಪ್ರಭಾಷಣ ನೀಡಲಿದ್ದಾರೆ. ಮಾ.24ರಂದು ಸಮಾರೋಪ ಸಮಾರಂಭ ನಡೆಯಲಿದ್ದು, ದುವಾಶೀರ್ವಚನ ಹಾಗೂ ಸಾಮೂಹಿಕ ಪ್ರಾರ್ಥನೆಯ ನೇತೃತ್ವವನ್ನು ಅಸ್ಸಯ್ಯದ್ ಶಮೀರಲಿ ಶಿಹಾಬ್ ತಂಙಳ್ ಪಾಣಕ್ಕಾಡ್ ವಹಿಸಲಿದ್ದಾರೆ. ಅಬೂಬಕ್ಕರ್ ಸಿದ್ದೀಕ್ ಅಝ್‍ಹರಿ ಪಯ್ಯನ್ನೂರು ಮುಖ್ಯ ಪ್ರಭಾಷಣ ಮಾಡಲಿದ್ದಾರೆ ಎಂದು ಅವರು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಜಮಾಅತ್ ಕಮಿಟಿ ಉಪಾಧ್ಯಕ್ಷ ಫಕ್ರುದ್ದೀನ್ ಹಾಜಿ ಕೊಯ್ಲ, ಕೋಶಾಧಿಕಾರಿ ಆದಂ ಹಾಜಿ ಡೆಂಬಳೆ, ಸದಸ್ಯ ಅಲಿಕುಂಞಿ ಹಾಜಿ ಪಿಲಿಪುಡೆ ಉಪಸ್ಥಿತರಿದ್ದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News