ಬಿಜೆಪಿ ಕಾರ್ಯಕರ್ತರು ಸಾರ್ವಜನಿಕವಾಗಿ ಅಸಭ್ಯವಾಗಿ ವರ್ತಿಸಬಾರದು: ಸಿಎಂ ಕುಮಾರಸ್ವಾಮಿ

Update: 2019-03-19 14:54 GMT

ಬೆಂಗಳೂರು, ಮಾ.19: ಬಿಜೆಪಿ ಕಾರ್ಯಕರ್ತರು ಸಾರ್ವಜನಿಕವಾಗಿ ಹೇಗೆ ನಡೆದುಕೊಳ್ಳಬೇಕೆಂದು ಕಲಿತುಕೊಳ್ಳಲಿ. ತದನಂತರ ರಾಜಕೀಯ ಕುರಿತು ಮಾತನಾಡಲಿ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.

ಮಂಗಳವಾರ ನಗರದ ಖಾಸಗಿ ಹೊಟೇಲ್‌ನಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಯಾವುದೆ ಪಕ್ಷದ ನಾಯಕರಿಗೆ ಗೌರವ ಕೊಡುವುದನ್ನು ಬಿಜೆಪಿ ಕಾರ್ಯಕರ್ತರು ಮೊದಲು ಕಲಿತುಕೊಳ್ಳಬೇಕು. ಸಾರ್ವಜನಿಕವಾಗಿ ಅಸಭ್ಯವಾಗಿ ವರ್ತಿಸುವುದು ಒಳ್ಳೆಯ ಲಕ್ಷಣವಲ್ಲವೆಂದು ತಿಳಿಸಿದರು.

ಈ ವೇಳೆ ಸಿದ್ದರಾಮಯ್ಯ ಮಾತನಾಡಿ, ಒಂದು ಪಕ್ಷದ ರಾಷ್ಟ್ರೀಯ ಅಧ್ಯಕ್ಷರ ಆಗಮನಕ್ಕೆ, ಮುಕ್ತ ಸಂವಾದಕ್ಕೆ ಅಡ್ಡಿಪಡಿಸುವುದು ಒಳ್ಳೆಯ ಲಕ್ಷಣವಲ್ಲ. ಯಾವುದೆ ಪಕ್ಷದ ಕಾರ್ಯಕರ್ತರಾದರೂ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು. ರಾಹುಲ್‌ಗಾಂಧಿಗೆ ಬಿಜೆಪಿ ಕಾರ್ಯಕರ್ತರು ಧಿಕ್ಕಾರ ಕೂಗಿದ್ದು ಒಳ್ಳೆಯ ಬೆಳವಣಿಗೆಯಲ್ಲವೆಂದು ತಿಳಿಸಿದರು.

ಯಾರನ್ನೂ ಬಂಧಿಸಿಲ್ಲ: ರಾಹುಲ್‌ ಗಾಂಧಿ ವಿರುದ್ಧ ಘೋಷಣೆ ಕೂಗಿದ ಬಿಜೆಪಿ, ಆರೆಸ್ಸೆಸ್ ಕಾರ್ಯಕರ್ತರನ್ನು ಬಂಧಿಸಿಲ್ಲ. ಸುರಕ್ಷತೆಯ ದೃಷ್ಟಿಯಿಂದ ಕೆಲವರನ್ನು ಪೊಲೀಸರು ವಶಕ್ಕೆ ಪಡೆದು, ತದನಂತರ ಬಿಡುಗಡೆ ಮಾಡಿದ್ದಾರೆ ಎಂದು ಅವರು ಸ್ಪಷ್ಟಪಡಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News