ಕಾಂಗ್ರೆಸ್ ಶಾಸಕ ಬಿ.ನಾಗೇಂದ್ರ ಸಹೋದರ ಬಿಜೆಪಿ ಸೇರ್ಪಡೆ

Update: 2019-03-19 14:59 GMT

ಬಳ್ಳಾರಿ, ಮಾ.19: ಬಳ್ಳಾರಿ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಶಾಸಕ ಬಿ.ನಾಗೇಂದ್ರ ಸೋದರ ಬಿ.ವೆಂಕಟೇಶ್‌ ಪ್ರಸಾದ್ ಬಿಜೆಪಿಗೆ ಸೇರ್ಪಡೆಯಾಗಿದ್ದು, ಬಳ್ಳಾರಿ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಯುವ ನಿರೀಕ್ಷೆ ಇದೆ.

ನಗರದ ಬಿಜೆಪಿ ಕಚೇರಿಯಲ್ಲಿ ಜಿಲ್ಲಾ ಘಟಕದ ಅಧ್ಯಕ್ಷ ಚನ್ನಬಸವನಗೌಡ, ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯ ಸಂಜಯ್, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷೆ ದೀನಾ ಮೃತ್ಯುಂಜಯ ಜಿನಗ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಗೊಂಡರು. ಈ ಬಳಿಕ ಬಿ.ವೆಂಕಟೇಶ್ ಪ್ರಸಾದ್ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿಯವರ ಆಡಳಿತ ಮೆಚ್ಚಿ ಬಿಜೆಪಿಗೆ ಸೇರ್ಪಡೆಯಾಗಿದ್ದೇನೆ. ಬಿಜೆಪಿ ಮುಖಂಡರು ಅವಕಾಶ ನೀಡಿದರೆ ಬಳ್ಳಾರಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತೇನೆ. ನಾನು ಬಿಜೆಪಿಗೆ ಬಂದಿರುವುದು, ನನ್ನ ಸಹೋದರ ಬಿ.ನಾಗೇಂದ್ರ ಕಾಂಗ್ರೆಸ್‌ನಲ್ಲಿ ಇರುವುದಕ್ಕೆ ಯಾವುದೆ ಸಂಬಂಧವಿಲ್ಲವೆಂದು ತಿಳಿಸಿದರು.

ಕಳೆದ ಬಳ್ಳಾರಿ ಲೋಕಸಭಾ ಉಪ ಚುನಾವಣೆಯಲ್ಲಿ ಸ್ಪರ್ಧಿಸಲು ಬಿ.ವೆಂಕಟೇಶ್ ಪ್ರಸಾದ್ ಕಾಂಗ್ರೆಸ್‌ನಿಂದ ಟಿಕೆಟ್ ಕೇಳಿದ್ದರು. ಆದರೆ, ಕೊನೆಯ ಹಂತದಲ್ಲಿ ಕಾಂಗ್ರೆಸ್ ಹೈ ಕಮಾಂಡ್ ಉಗ್ರರಪ್ಪರಿಗೆ ಟಿಕೆಟ್ ನೀಡಿತು. ಅಂದಿನಿಂದಲೆ ಬಿ.ವೆಂಕಟೇಶ್‌ ಪ್ರಸಾದ್ ಕಾಂಗ್ರೆಸ್‌ನಿಂದ ದೂರು ಉಳಿದಿದ್ದರು. ಈಗ ಬಿಜೆಪಿ ಟಿಕೆಟ್ ನೀಡುವ ಭರವಸೆಯ ಹಿನ್ನೆಲೆಯಲ್ಲಿ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ ಎನ್ನಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News