ಆಗುಂಬೆ ಘಾಟಿ ವಾಹನ ಸಂಚಾರ ನಿಷೇಧ: ಆದೇಶ ಹಿಂತೆಗೆತ

Update: 2019-03-19 15:32 GMT

ಉಡುಪಿ, ಮಾ.19: ಮಲ್ಪೆ-ತೀರ್ಥಹಳ್ಳಿ ರಾಷ್ಟ್ರೀಯ ಹೆದ್ದಾರಿ 169ಎ ಯಲ್ಲಿ  ರಸ್ತೆ ದುರಸ್ಥಿಗಾಗಿ ಆಗುಂಬೆ ಘಾಟಿ ಮೂಲಕ ಸಾಗುವ ವಾಹನ ಸಂಚಾರವನ್ನು ಮಾ.19ರಿಂದ 30 ದಿನಗಳವರೆಗೆ ನಿಷೇಧಿಸಿ ಮಾ. 7ರಂದು ಹೊರಡಿಸಲಾಗಿದ್ದ ಆದೇಶವನ್ನು ಹಿಂಪಡೆಯಲಾಗಿದೆ ಎಂದು ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಣಿ ತಿಳಿಸಿದ್ದಾರೆ.

ಆಗುಂಬೆಯಲ್ಲಿ ರಕ್ಷಣಾ ತಡೆಗೋಡೆಗಳ ಮರು ನಿರ್ಮಾಣ ಹಾಗೂ ದುರಸ್ಥಿ ಕಾರ್ಯ ಆರಂಭಿಸಲು ಅರಣ್ಯ ಇಲಾಖೆಯ ಮೇಲಾಧಿಕಾರಿಗಳಿಂದ ಸೂಕ್ತ ನಿರ್ದೇಶನದ ಅನುಮತಿ ಪಡೆಯಬೇಕಾಗಿದೆ ಎಂದು ಕಾರ್ಕಳ ಕುದುರೆಮುಖ ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ತಿಳಿಸಿದ್ದಾರೆ.

ಅನುಮತಿ ದೊರಕುವವರೆಗೆ ಈ ರಸ್ತೆಯಲ್ಲಿ ವಾಹನಗಳ ಸಂಚಾರ ನಿಷೇಧಿಸಿ ಹೊರಡಿಸಿದ್ದ ಆದೇಶವನ್ನು ಹಿಂಪಡೆದು, ಮುಂದಿನ ಆದೇಶದವರೆಗೂ ವಾಹನ ಸಂಚಾರಕ್ಕೆ ಮಾರ್ಗವನ್ನು ಮುಕ್ತಗೊಳಿಸಿ ಜಿಲ್ಲಾಧಿಕಾರಿ ಹೆಪ್ತಿಬಾ ರಾಣಿ ಆದೇಶ ಹೊರಡಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News