ಚುನಾವಣೆ: ಬೂತ್ ಮಟ್ಟದ ಅಧಿಕಾರಿಗಳಿಗೆ ತರಬೇತಿ

Update: 2019-03-19 15:40 GMT

ಉಡುಪಿ, ಮಾ.19: ಉಡುಪಿ ಜಿಲ್ಲಾಡಳಿತ, ಸ್ಪೀಪ್, ಸಾರ್ವಜನಿಕ ಶಿಕ್ಷಣ ಇಲಾಖೆ, ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ಉಡುಪಿ, ತಾಪಂ ಉಡುಪಿ, ಕ್ಷೇತ್ರ ಶಿಕ್ಷಣಾಧಿಕಾರಿಗಳು ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಚುನಾವಣಾ ಸಾಕ್ಷರತಾ ಕ್ಲಬ್ ಸಂಚಾಲಕರು ಮತ್ತು ಬೂತ್ ಮಟ್ಟದ ಅಧಿಕಾರಿಗಳಿಗೆ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ತರಬೇತಿ ಕಾರ್ಯಕ್ರಮವನ್ನು ಸ್ವೀಪ್ ಸಮಿತಿಯ ಅಧ್ಯಕ್ಷರು ಹಾಗೂ ಜಿಪಂನ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಸಿಂಧೂ ಬಿ ರೂಪೇಶ್ ಉದ್ಘಾಟಿಸಿ, ತರಬೇತಿಗೆ ಬಂದಿದ್ದ ಶಿಕ್ಷಕರಿಗೆ ತಮ್ಮ ಶಾಲಾ ಮಕ್ಕಳ ಮೂಲಕ ಪೋಷಕರಿಗೆ ಮತದಾನದ ಕುರಿತು ಜಾಗೃತಿಯನ್ನು ವುೂಡಿಸುವಂತೆ ಕಿವಿಮಾತು ಹೇಳಿದರು.

ಉಡುಪಿ ತಾಪಂ ಕಾರ್ಯನಿರ್ವಾಹಣಾಧಿಕಾರಿ ಕೆ. ರಾಜು ಮತದಾನದ ಪ್ರತಿಜ್ಞೆ ಬೋಧಿಸಿದರು. ಉಡುಪಿ ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಶೇಷಶಯನ ಕಾರಿಂಜೆ, ಡಯಟ್‌ನ ಉಪನಿರ್ದೇಶಕರು ಹಾಗೂ ಪ್ರಾಂಶುಪಾಲ ಎಚ್. ಚಂದ್ರಶೇಖರ್, ಉಡುಪಿ ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುಳಾ, ಡಯಟ್‌ನ ಉಪನ್ಯಾಸಕ ಸುಬ್ರಮಣ್ಯ, ವಿಷಯ ಪರಿವೀಕ್ಷಕ ನಾಗರಾಜು, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಮಧುಕರ್, ಚಿತ್ರಕಲಾ ಶಿಕ್ಷಕ ಪ್ರಶಾಂತ್ ಬಿ.ಪಿ. ಮತ್ತಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News