ಮಂಗಳೂರು: ಮಿಲಾಗ್ರಿಸ್ ಕಾಲೇಜಿನಲ್ಲಿ ಉದ್ಯೋಗ ಮೇಳ

Update: 2019-03-19 17:18 GMT

ಮಂಗಳೂರು, ಮಾ.19: ನಗರದ ಮಿಲಾಗ್ರಿಸ್ ಕಾಲೇಜಿನಲ್ಲಿ ಉದ್ಯೋಗ ಮೇಳ- 2019 ಕಾರ್ಯಕ್ರಮವನ್ನು ಮಂಗಳವಾರ ಆಯೋಜಿಸಲಾಯಿತು.

ಮುಖ್ಯಅತಿಥಿಯಾಗಿ ಆಗಮಿಸಿದ ಮಂಗಳೂರಿನ ಸಂತ ಅಲೋಶಿಯಸ್ ಕಾಲೇಜಿನ ಪಿಜಿಡಿಬಿಎಂ ಡೀನ್ ಪ್ರೊ.ಎಡ್ಮಂಡ್ ಫ್ರಾಂಕ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಉದ್ಯೋಗಮೇಳವು ಯುವಕರಿಗೆ ಸ್ಫೂರ್ತಿದಾಯಕವಾಗಿದೆ. ಅರ್ಹ ವಿದ್ಯಾವಂತರಿಗೆ ಸೂಕ್ತ ಉದ್ಯೋಗ ಅವಕಾಶಗಳನ್ನು ಕಲ್ಪಿಸಿ ಕೊಡುವುದು ಈ ಉದ್ಯೋಗಮೇಳದ ಉದ್ದೇಶವಾಗಿದೆ ಎಂದು ಹೇಳಿದರು.

ಸ್ಪೆಕ್ಟ್ರಂ ಇಂಡಸ್ಟ್ರೀಸ್‌ನ ಸಿಇಒ ಜೀವನ್ ಸಲ್ಡಾನ್ಹಾ ಮಾತನಾಡಿ, ಆಧುನಿಕ ಯುವಜನತೆ ತಮ್ಮ ಸಾಧನೆಯ ಗುರಿ ಮುಟ್ಟಲು ಸ್ಪರ್ಧಾತ್ಮಕ ಚಿಂತನೆ ಅಗತ್ಯ ಎಂದು ಹೇಳಿದರು.

ಕಾಲೇಜಿನ ಸಂಚಾಲಕ ವಂ.ಫಾ. ವಲೇರಿಯನ್ ಡಿಸೋಜ, ಮಿಲಾಗ್ರಿಸ್ ಚರ್ಚಿನ ಪಾಲನಾ ಸಮಿತಿಯ ಉಪಾಧ್ಯಕ್ಷೆ ಸಿಸಿಲಿಯಾ ಪಿರೇರಾ, ಶಿಕ್ಷಕ-ರಕ್ಷಕ ಸಭೆಯ ಅಧ್ಯಕ್ಷೆ ಲವಿನಾ ಲೋಬೊ, ಹಳೆವಿದ್ಯಾರ್ಥಿ ಸಂಘದ ಅಧ್ಯಕ್ಷ ಆಶಿಷ್ ಬಾವಾ, ವಿದ್ಯಾರ್ಥಿ ನಾಯಕ ಸಾವಿಯೊ ಡಿಸೋಜ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕಾಲೇಜಿನ ಪ್ರಾಂಶುಪಾಲ ವಂ.ಫಾ. ಮೈಕಲ್ ಸಾಂತುಮಾಯೋರ್ ಅತಿಥಿಗಳನ್ನು ಸ್ವಾಗತಿಸಿದರು. ಉದ್ಯೋಗಮೇಳದ ಸಂಯೋಜಕಿ ಸುಮನ್ ಲಸ್ರಾದೊ ವಂದಿಸಿದರು. ಉಪನ್ಯಾಸಕಿ ಅನುಷಾ ಜೋಸ್ ಕಾರ್ಯಕ್ರಮ ನಿರೂಪಿಸಿದರು.

ಉದ್ಯೋಗಮೇಳದಲ್ಲಿ 60ಕ್ಕೂ ಹೆಚ್ಚು ಪ್ರತಿಷ್ಠಿತ ಹಾಗೂ ಹೆಸರಾಂತ ಕಂಪೆನಿಗಳು ಪಾಲ್ಗೊಂಡಿದ್ದವು. ಸುಮಾರು 900ಕ್ಕೂ ಅಧಿಕ ಉದ್ಯೋಗಾಕಾಂಕ್ಷಿಗಳು ಇದರ ಪ್ರಯೋಜನ ಪಡೆದುಕೊಂಡರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News