ಎನ್‌ಕೌಂಟರ್: ನಕ್ಸಲ್ ಮಹಿಳೆ ಸಾವು

Update: 2019-03-19 17:22 GMT

ರಾಜ್‌ನಂದಗಾಂವ್, ಮಾ. 19: ಛತ್ತೀಸ್‌ಗಡದ ರಾಜ್‌ನಂದಗಾಂವ್ ಜಿಲ್ಲೆಯಲ್ಲಿ ಮಂಗಳವಾರ ಭದ್ರತಾ ಪಡೆ ಯೋಧರು ಹಾಗೂ ನಕ್ಸಲೀಯರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಓರ್ವ ನಕ್ಸಲ್ ಮಹಿಳೆ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಧ್ಯಪ್ರದೇಶ ಹಾಗೂ ಛತ್ತೀಸಗಡದ ಜಂಟಿ ತಂಡ ನಕ್ಸಲ್ ವಿರೋಧಿ ಕಾರ್ಯಾಚರಣೆ ನಡೆಸುತ್ತಿದ್ದ ಸಂದರ್ಭ ಮಧ್ಯಪ್ರದೇಶದ ಗಡಿಯಲ್ಲಿರುವ ಗಾಟಪಾರ ಪೊಲೀಸ್ ಠಾಣೆ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ಈ ಗುಂಡಿನ ಚಕಮಕಿ ನಡೆದಿದೆ. ಎನ್‌ಕೌಂಟರ್ ಮುಗಿದ ಬಳಿಕ ನಕ್ಸಲ್ ಮಹಿಳೆಯೋರ್ವರ ಮೃತದೇಹ ಪತ್ತೆಯಾಗಿದೆ. ಸ್ಥಳದಲ್ಲಿ ಅಟೋಮ್ಯಾಟಿಕ್ ಬಂದೂಕು ಕೂಡ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮುಂದಿನ ತಿಂಗಳು ಲೋಕಸಭಾ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ರಾಜ್‌ನಂದಗಾಂವ್, ಬಾಲಘಾಟ್ (ಮಧ್ಯಪ್ರದೇಶ), ಗೋಡಿಯಾ (ಮಹಾರಾಷ್ಟ್ರ)ದ ವ್ಯಾಪ್ತಿಯಲ್ಲಿ ಬರುವ ಅರಣ್ಯಗಳಲ್ಲಿ ಕಳೆದ ಕೆಲವು ದಿನಗಳಿಂದ ಪೊಲೀಸರು ನಕ್ಸಲ್ ವಿರೋಧಿ ಕಾರ್ಯಾಚರಣೆ ನಡೆಸುತ್ತಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News