ಮಾ. 21ರಿಂದ ಎಸೆಸೆಲ್ಸಿ ಪರೀಕ್ಷೆ: ಕೇಂದ್ರಗಳ ಸುತ್ತ ನಿಷೇಧಾಜ್ಞೆ

Update: 2019-03-19 17:29 GMT

ಮಂಗಳೂರು, ಮಾ.19: ದ.ಕ. ಜಿಲ್ಲೆಯ 95 ಪರೀಕ್ಷಾ ಕೇಂದ್ರಗಳಲ್ಲಿ ಮಾ.21ರಿಂದ ಎಪ್ರಿಲ್ 4ರವರೆಗೆ ಎಸೆಸೆಲ್ಸಿ ಪರೀಕ್ಷೆಗಳು ನಡೆಯಲಿದ್ದು, ಮುಂಜಾಗರೂಕತಾ ಕ್ರಮವಾಗಿ ದ.ಕ. ಜಿಲ್ಲೆಯ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯನ್ನು ಹೊರತುಪಡಿಸಿ 48 ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ ಸೆ.144ರಂತೆ ನಿಷೇಧಾಜ್ಞೆಯನ್ನು ಜಾರಿಗೊಳಿಸಿ ದ.ಕ.ಜಿಲ್ಲಾಧಿಕಾರಿ ಹಾಗೂ ದಂಡಾಧಿಕಾರಿ ಸಸಿಕಾಂತ್ ಸೆಂಥಿಲ್ ಆದೇಶಿಸಿದ್ದಾರೆ.

ಈ ಅವಧಿಯಲ್ಲಿ ನಿಷೇಧಿತ ವಲಯದಲ್ಲಿ ಯಾವುದೇ ರೀತಿಯಲ್ಲಿ ಪರೀಕ್ಷೆಯಲ್ಲಿ ನಕಲು ಹೊಡೆಯಲು ಸಹಾಯ ಮಾಡುವುದು ಇನ್ನಿತರ ರೀತಿಯಲ್ಲಿ ಉತ್ತರಗಳನ್ನು ಬರೆದು ಹಂಚುವುದು ಅಥವಾ ಇನ್ನಾವುದೇ ವಸ್ತುಗಳನ್ನು ಹಂಚುವುದು/ರವಾನಿಸುವುದು ಇತ್ಯಾದಿ ಚಟುವಟಿಕೆಗಳನ್ನು ಸಂಪೂರ್ಣ ನಿಷೇಧಿಸಿದೆ. ನಿಷೇಧಿತ ವಲಯದಲ್ಲಿ ಯಾವುದೇ ರೀತಿಯ ಸ್ಫೋಟಕ ವಸ್ತುಗಳನ್ನು ಕೊಂಡು ಹೋಗುವುದನ್ನು ಹಾಗೂ ಇನ್ನಿತರ ಆಯುಧಗಳನ್ನು ಹೊಂದುವುದನ್ನು ನಿಷೇಧಿಸಲಾಗಿದೆ. ನಿಷೇಧಿತ ವಲಯದಲ್ಲಿ ಪರೀಕ್ಷೆಗೆ ಸಂಬಂಧಿಸಿದ ಯವುದೇ ವಿಷಯಗಳನ್ನು /ಮಾಹಿತಿಯನ್ನು ರವಾನಿಸುವ ಅಥವಾ ತಿಳಿಸುವ ಸಲುವಾಗಿ ಸಂಜ್ಞೆಗಳನ್ನು ಮಾಡುವುದು ಹಾಗೂ ಇನ್ನಿತರ ಕ್ರಿಯೆಗಳಲ್ಲಿ ತೊಡಗುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

ಪರೀಕ್ಷೆ ಪ್ರಾರಂಭವಾಗುವ 1ಗಂಟೆ ಮುಂಚಿತವಾಗಿ ಹಾಗೂ ಪರೀಕ್ಷಾ ಅವಧಿಯವರೆಗೆ ಪರೀಕ್ಷಾ ಕೇಂದ್ರಗಳಿಂದ 200 ಮೀಟರ್ ವ್ಯಾಪ್ತಿಯಲ್ಲಿರುವ ಜೆರಾಕ್ಸ್ ಅಂಗಡಿಗಳು ಕಾರ್ಯನಿರ್ವಹಿಸುವುದನ್ನು ಕೂಡ ನಿಷೇಧಿಸಲಾಗಿದೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News