ರೆಡ್‌ಕ್ರಾಸ್‌ನಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ

Update: 2019-03-19 17:30 GMT

ಮಂಗಳೂರು, ಮಾ.19: ಭಾರತೀಯ ರೆಡ್‌ಕ್ರಾಸ್ ಸಂಸ್ಥೆ, ದ.ಕ. ಜಿಲ್ಲಾ ಶಾಖೆ, ಮಂಗಳೂರು ಮತ್ತು ಕುಂಟಿಕಾನದ ಭಾರತ್ ಆಟೋ ಕಾರ್ಸ್‌ (ಪೈ). ಲಿ. ಜಂಟಿ ಆಶ್ರಯದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯು ಮಂಗಳವಾರ ಕುಂಟಿಕಾನದಲ್ಲಿ ನಡೆಯಿತು.

ರೆಡ್‌ಕ್ರಾಸ್ ಅಧ್ಯಕ್ಷ ಸಿಎ ಶಾಂತರಾಮ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಮಹಿಳಾ ಸಮಿತಿಯ ಅಧ್ಯಕ್ಷೆ ವಸುಧಾ ರೈ ಉದ್ಘಾಟಿಸಿದರು. ಭಾರತೀಯ ರೆಡ್‌ಕ್ರಾಸ್ ಸಂಸ್ಥೆಯ ಗೌರವ ಕಾರ್ಯದರ್ಶಿ ಪ್ರಭಾಕರ ಶರ್ಮ, ವಿಕಲಚೇತನ ಉಪಸಮಿತಿಯ ನಿತ್ಯಾನಂದ ಶೆಟ್ಟಿ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News