ಎಸೆಸೆಲ್ಸಿ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಕೆಎಸ್ಸಾರ್ಟಿಸಿ ಬಸ್‌ಗಳಲ್ಲಿ ಉಚಿತ ಪ್ರಯಾಣ

Update: 2019-03-19 17:36 GMT

ಬೆಂಗಳೂರು, ಮಾ.19: ಎಸೆಸೆಲ್ಸಿ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಮಾ.21 ರಿಂದ ಎ.4ರವರೆಗೆ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ಕೆಎಸ್ಸಾರ್ಟಿಸಿ ವತಿಯಿಂದ ವಿತರಿಸಿರುವ/ಪಡೆದಿರುವ ವಿದ್ಯಾರ್ಥಿ ರಿಯಾಯಿತಿ ಬಸ್ ಪಾಸು ಮತ್ತು ಪರೀಕ್ಷಾ ಪ್ರವೇಶ ಪತ್ರವನ್ನು ತೋರಿಸಿ ಪ್ರಯಾಣಿಸಬಹುದು.

ತಮ್ಮ ವಾಸಸ್ಥಳದಿಂದ ಪರೀಕ್ಷಾ ಕೇಂದ್ರದವರೆಗೆ ಹಾಗೂ ವಾಸ ಸ್ಥಳಕ್ಕೆ ಹಿಂದಿರುಗುವಾಗ ವಿದ್ಯಾರ್ಥಿ ರಿಯಾಯಿತಿ ಪಾಸು ಮತ್ತು ಪರೀಕ್ಷಾ ಪ್ರವೇಶ ಪತ್ರವನ್ನು ತೋರಿಸಿ ನಿಗಮದ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಕೆಎಸ್ಸಾರ್ಟಿಸಿ ಮುಖ್ಯ ಸಂಚಾರ ವ್ಯವಸ್ಥಾಪಕರು ಅನುಮತಿ ನೀಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News