ಬರ್ಖಾ ದತ್ ಗೆ ಮಾನಹಾನಿಕರ ಸಂದೇಶ ರವಾನೆ: ನಾಲ್ವರ ಬಂಧನ

Update: 2019-03-20 15:03 GMT

ಹೊಸದಿಲ್ಲಿ, ಮಾ. 20: ಸಾಮಾಜಿಕ ಜಾಲಾತಾಣದಲ್ಲಿ ಹಿರಿಯ ಪತ್ರಕರ್ತೆ ಬರ್ಖಾ ದತ್ ಅವರಿಗೆ ನಿಂದನಾತ್ಮಕ ಸಂದೇಶ ರವಾನಿಸಿದ ಆರೋಪದಲ್ಲಿ ನಾಲ್ಕು ಮಂದಿಯನ್ನು ದಿಲ್ಲಿ ಪೊಲೀಸ್‌ನ ಸೈಬರ್ ಸೆಲ್ ಬುಧವಾರ ಬಂಧಿಸಿದೆ.

ಅನಾಮಿಕ ವ್ಯಕ್ತಿಗಳಿಂದ ಬೆದರಿಕೆ ಕರೆ ಹಾಗೂ ಮಾನಹಾನಿಕರ ಸಂದೇಶಗಳನ್ನು ಸ್ವೀಕರಿಸಿದ ಬಳಿಕ ಬರ್ಖಾ ದತ್ ಅವರು ಫೆಬ್ರವರಿ 21ರಂದು ದಿಲ್ಲಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿದ್ದರು.

ಪೊಲೀಸರು ಹಾಗೂ ಇತರ ತಂಡ ತಾಂತ್ರಿಕ ಕಣ್ಗಾವಲು ಬಳಸಿಕೊಂಡು ನಾಲ್ವರನ್ನು ಬಂಧಿಸಿದೆ. ಬಂಧಿತರನ್ನು ದಿಲ್ಲಿಯ ರಾಜೀವ್ ಶರ್ಮಾ (23), ಹೇಮರಾಜ್ ಕುಮಾರ್ (31), ಆದಿತ್ಯ ಕುಮಾರ್ (34) ಹಾಗೂ ಸೂರತ್‌ನ ಶಬ್ಬೀರ್ ಗುರ್ಫಾನ್ ಪಿಂಜಾರಿ (45) ಎಂದು ಗುರುತಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದರು.

 ಪುಲ್ವಾಮ ಭಯೋತ್ಪಾದಕ ದಾಳಿಯ ಬಳಿಕ ಹಲ್ಲೆಯ ಗುರಿಯಾದ ಕಾಶ್ಮೀರಿಗಳಿಗೆ ನೆರವು ನೀಡಲು ದತ್ ಅವರು ಟ್ವಿಟರ್‌ನಲ್ಲಿ, ಸಹಾಯ ಕೋರುವವರು ಆನ್‌ಲೈನ್‌ನಲ್ಲಿ ಲಭ್ಯವಿರುವ ನನ್ನ ದೂರವಾಣಿ ಸಂಖ್ಯೆಗೆ ಕರೆ ಮಾಡಬಹುದು ಎಂದು ಮಾಹಿತಿ ನೀಡಿದ್ದರು. ಈ ಹಿನ್ನೆಲೆಯಲ್ಲಿ ಅವರು ಬೆದರಿಕೆ ಕರೆ ಹಾಗೂ ನಿಂದನಾತ್ಮಕ ಸಂದೇಶಗಳನ್ನು ಸ್ವೀಕರಿಸಿದ್ದರು.

ಪ್ರಕರಣದ ಬಗ್ಗೆ ತ್ವರಿತ ವಿಚಾರಣೆ ನಡೆಸುವಂತೆ ರಾಷ್ಟ್ರೀಯ ಮಹಿಳಾ ಹಕ್ಕು ಆಯೋಗ ದಿಲ್ಲಿ ಪೊಲೀಸ್ ಆಯುಕ್ತರನ್ನು ಆಗ್ರಹಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News