ಸಿಸಿಬಿ ದಾಳಿ: ಜೂಜಾಡುತ್ತಿದ್ದ 32 ಮಂದಿಯ ಬಂಧನ

Update: 2019-03-20 16:05 GMT

ಬೆಂಗಳೂರು, ಮಾ.20: ಹಣವನ್ನು ಪಣವಾಗಿ ಕಟ್ಟಿಕೊಂಡು ಜೂಜಾಟ ನಡೆಸುತ್ತಿದ್ದ ಆರೋಪದಡಿ ಕ್ಲಬ್‌ವೊಂದರ ಮೇಲೆ ದಾಳಿ ನಡೆಸಿರುವ ಸಿಸಿಬಿ ಪೊಲೀಸರು, 32 ಜನರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ

ನಗರದ ದೇವಸಂದ್ರ, ಹೊಸ ಬಿಇಎಲ್ ರಸ್ತೆಯ ಕಟ್ಟಡವೊಂದರಲ್ಲಿ ನ್ಯೂ ಹರ್ಷಿತ ಸ್ಪೋರ್ಟ್ಸ್ ರಿಕ್ರಿಯೇಷನ್ ಅಸೋಸಿಯೇಷನ್ ಕ್ಲಬ್‌ನಲ್ಲಿ ನಿಯಮ ಉಲ್ಲಂಘಿಸಿ ಹಣ ಪಣವಾಗಿ ಕಟ್ಟಿಕೊಂಡು ಜೂಜಾಟ ಆಡುತ್ತಿದ್ದ ಬಗ್ಗೆ ಮಾಹಿತಿ ಸಂಗ್ರಹಿಸಿ ದಾಳಿ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ.

ಜೂಜಾಟಕ್ಕೆ ಸಂಬಂಧಿಸಿದ 76 ಸಾವಿರ ರೂ.ನಗದು, ಜಪ್ತಿ ಮಾಡಿ ಇಲ್ಲಿನ ಸಂಜಯ್‌ನಗರ ಪೊಲೀಸ್ ಠಾಣೆಯಲ್ಲಿ ಮೊಕದ್ದಮೆ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ ಎಂದು ಸಿಸಿಬಿ ಡಿಸಿಪಿ ಎಸ್.ಗಿರೀಶ್ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News