ಎಸೆಸೆಲ್ಸಿ ಪರೀಕ್ಷೆ: ನಿಗಮದ ಬಸ್‌ಗಳಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣ
Update: 2019-03-20 21:44 IST
ಉಡುಪಿ, ಮಾ. 20: ಗುರುವಾರದಿಂದ ಪ್ರಾರಂಭಗೊಳ್ಳುವ ಈ ಬಾರಿಯ ಎಸೆಸೆಲ್ಸಿ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಿದೆ.
ಪರೀಕ್ಷೆ ನಡೆಯುವ ದಿನಗಳಲ್ಲಿ ಅಂದರೆ ಮಾ. 21ರಿಂದ ಎ.4 ರವರೆಗೆ ಪರೀಕ್ಷೆಗೆ ಹಾಜರಾಗುವ, ನಿಗಮದ ವತಿಯಿಂದ ವಿತರಿಸಿರುವ ವಿದ್ಯಾರ್ಥಿ ರಿಯಾಯಿತಿ ಬಸ್‌ಪಾಸ್ ಹೊಂದಿರುವ ವಿದ್ಯಾರ್ಥಿಗಳು ಪರೀಕ್ಷಾ ಅವಧಿಯಲ್ಲಿ ತಮ್ಮ ವಾಸ ಸ್ಥಳದಿಂದ ಪರೀಕ್ಷಾ ಕೇಂದ್ರದವರೆಗೆ ಮತ್ತು ವಾಸಸ್ಥಳಕ್ಕೆ ಹಿಂದಿರುಗುವಾಗ ಬಸ್ ಪಾಸ್ ಹಾಗು ಪರೀಕ್ಷಾ ಪ್ರವೇಶ ಪತ್ರವನ್ನು ತೋರಿಸಿ ನಿಗಮದ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ.
ವಿದ್ಯಾರ್ಥಿಗಳು ಈ ಸೌಲಭ್ಯವನ್ನು ಸದುಪಯೋಗಪಡಿಸಿಕೊಳ್ಳುವಂತೆ ಮಂಗಳೂರು ಕರಾರಸಾಸಂ ವಿಭಾಗೀಯ ನಿಯಂತ್ರಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.