ಚುನಾವಣೆಗೆ ಮುನ್ನ ಕಾಂಗ್ರೆಸ್ ಮತ್ತು ಮಿತ್ರಪಕ್ಷಗಳಿಗೆ ಯಶವಂತ ಸಿನ್ಹಾರಿಂದ ಕಿವಿಮಾತು

Update: 2019-03-20 17:18 GMT

ಹೊಸದಿಲ್ಲಿ,ಮಾ.20: ಕಾಂಗ್ರೆಸ್ ಪಕ್ಷವು ಏಕೈಕ ರಾಷ್ಟ್ರೀಯ ಪಕ್ಷವಾಗಿದೆ ಮತ್ತು ಹಲವಾರು ರಾಜ್ಯಗಳಲ್ಲಿ ಅದು ನಾಯಕತ್ವವನ್ನು ಪ್ರದರ್ಶಿಸುವ ಅಗತ್ಯವಿದೆ ಎಂದು ಮಾಜಿ ಕೇಂದ್ರ ಸಚಿವ ಯಶವಂತ ಸಿನ್ಹಾ ಅವರು ಬುಧವಾರ ಹೇಳಿದ್ದಾರೆ.

ಆಂಗ್ಲ ಸುದ್ದಿವಾಹಿನಿಯೊಂದಿಗೆ ಮಾತನಾಡುತ್ತಿದ್ದ ಅವರು,ಪ್ರತಿಪಕ್ಷಗಳು ತಮ್ಮ ಭಿನ್ನಾಭಿಪ್ರಾಯಗಳನ್ನು ಮರೆತು ಒಗ್ಗಟ್ಟಾಗುವ ಅಗತ್ಯವನ್ನು ಒತ್ತಿ ಹೇಳಿದರು. ಕಾಂಗ್ರೆಸ್‌ನೊಂದಿಗೆ ಒಡಂಬಡಿಕೆ ಮಾಡಿಕೊಳ್ಳುವಂತೆ ಮತ್ತು ಮೂರು ಪಕ್ಷಗಳು ಒಂದಾಗಿ ಚುನಾವಣೆ ಎದುರಿಸುವಂತೆ ಉತ್ತರ ಪ್ರದೇಶದ ಮಾಯಾವತಿ-ಅಖಿಲೇಶ್ ಮೈತ್ರಿಗೂ ಅವರು ಕಿವಿಮಾತು ಹೇಳಿದರು.

ಅಟಲ್ ಬಿಹಾರಿ ವಾಜಪೇಯಿ ಸರಕಾರದಲ್ಲಿ ಸಚಿವರಾಗಿದ್ದು,ಕಳೆದ ವರ್ಷ ಬಿಜೆಪಿಯನ್ನು ತೊರೆದಿರುವ ಸಿನ್ಹಾ,ತನ್ನ ಮೈತ್ರಿಗಳನ್ನು ಬಿಜೆಪಿ ಉತ್ತಮವಾಗಿ ನಿರ್ವಹಿಸುತ್ತಿದೆ ಎಂದರು.

ಕಾಂಗ್ರೆಸ್‌ನ ಆಂತರಿಕ ಲೆಕ್ಕಾಚಾರಗಳು ತನಗೆ ತಿಳಿದಿಲ್ಲ,ತಾನು ಫಲಿತಾಂಶಗಳನ್ನು ನೋಡುತ್ತಿದ್ದೇನೆ ಎಂದರು.

ಪ್ರತಿಪಕ್ಷಗಳ ಒಗ್ಗಟ್ಟು ಸಾಧಿಸುವ ಹೆಚ್ಚಿನ ಹೊಣೆ ಕಾಂಗ್ರೆಸ್‌ನದ್ದಾಗಿದೆ ಎಂದು ಬೆಟ್ಟು ಮಾಡಿದ ಅವರು, ಕಾಂಗ್ರೆಸ್ ಏಕೈಕ ರಾಷ್ಟ್ರೀಯ ಪಕ್ಷವಾಗಿದೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ಅದು ಹೆಚ್ಚಿನ ಸ್ಥಾನಗಳನ್ನು ಗೆದ್ದಿಲ್ಲವಾದರೂ ಅದರ ಹೆಗಲುಗಳ ಮೆಲೆ ಹೆಚ್ಚಿನ ಹೊಣೆಗಾರಿಕೆಯಿದೆ. ಹಲವಾರು ರಾಜ್ಯಗಳಲ್ಲಿ ಕಾಂಗ್ರೆಸ್‌ನ ನಾಯಕತ್ವ ಬೇಕಾಗಿದೆ. ನಮ್ಮ ಬಳಿ ಹೆಚ್ಚು ಸಮಯವಿಲ್ಲ ಎಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News