ಅಕ್ರಮ ಮರಳು ಸಾಗಾಟ: ಲಕ್ಷಾಂತರ ರೂ. ಮೌಲ್ಯದ ಮರಳು ಸಹಿತ ಲಾರಿ ವಶ

Update: 2019-03-20 17:19 GMT

ಮಂಗಳೂರು, ಮಾ. 20: ಯಾವುದೇ ಪರವಾನಿಗೆಯಿಲ್ಲದೇ ಅಕ್ರಮವಾಗಿ ಮರಳನ್ನು ಸಾಗಾಟ ಮಾಡುತ್ತಿದ್ದ ಲಾರಿ ಹಾಗೂ ಲಕ್ಷಾಂತರ ರೂ.‌ ಮೌಲ್ಯದ ಸೊತ್ತನ್ನು ಕಂಕನಾಡಿ ನಗರ ಪೊಲೀಸರು ಬುಧವಾರ ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಬಿಸಿರೋಡ್ ಕಡೆಯಿಂದ ಪಡೀಲ್ ಮಾರ್ಗವಾಗಿ ಉಡುಪಿ ಕಡೆಗೆ ಹೋಗುತ್ತಿದ್ದ ಲಾರಿಯನ್ನು ಪೊಲೀಸರು ತಪಾಸಣೆ ನಡೆಸಿದರು. ಶೇಖರ್ ಎಂಬವರ ಮಾಲಕತ್ವದ ಹಾಗೂ ಮಧು ಎಂಬವರು ಚಾಲಕರಾಗಿರುವ ಲಾರಿಯಲ್ಲಿ ಮರಳನ್ನು ಯಾವುದೇ ಪರವಾನಿಗೆ ಇಲ್ಲದೆ ಉಡುಪಿಗೆ ಸಾಗಾಟ ಮಾಡುತ್ತಿರುವುದನ್ನು ಪತ್ತೆಯಾಗಿದೆ.

10.50 ಲಕ್ಷ ರೂ. ಮೌಲ್ಯದ ಮರಳು ಸಹಿತ ಲಾರಿಯನ್ನು ವಶಕ್ಕೆ ಪಡೆಯಲಾಗಿದೆ. ಮುಂದಿನ ಸೂಕ್ತ ಕಾನೂನು ಕ್ರಮಕ್ಕಾಗಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಉಪ ನಿರ್ದೇಶಕರಿಗೆ ಹಸ್ತಾಂತರಿಸಲಾಗಿದೆ.

ಮಂಗಳೂರು ನಗರ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್, ಡಿಸಿಪಿಗಳಾದ ಹನುಮಂತರಾಯ, ಉಮಾ ಪ್ರಶಾಂತ ಹಾಗೂ ಮಂಗಳೂರು ದಕ್ಷಿಣ ಉಪ ವಿಭಾಗದ ಸಹಾಯಕ ಪೊಲೀಸ್ ಆಯುಕ್ತ ರಾಮರಾವ್ ಮಾರ್ಗದರ್ಶನದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಕಂಕನಾಡಿ ನಗರ ಪೊಲೀಸ್ ಠಾಣಾ ನಿರೀಕ್ಷಕ ಜಗದೀಶ್, ಉಪ ನಿರೀಕ್ಷಕ ಪ್ರದೀಪ್ ಟಿ.ಆರ್. ಮತ್ತು ಠಾಣಾ ಸಿಬ್ಬಂದಿ ಭಾಗವಹಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News