ಟಿಕೆಟ್ ರಹಿತ ಪ್ರಯಾಣ: 8.27 ಲಕ್ಷ ರೂ.ದಂಡ ವಸೂಲಿ

Update: 2019-03-20 17:44 GMT

ಬೆಂಗಳೂರು, ಮಾ. 20: ಬೆಂಗಳೂರು ಮಹಾ ನಗರ ಸಾರಿಗೆ ಸಂಸ್ಥೆ ಬಸ್‌ಗಳಲ್ಲಿ ಟಿಕೆಟ್ ರಹಿತ ಪ್ರಯಾಣ ಮಾಡುತ್ತಿದ್ದ ಪ್ರಯಾಣಿಕರಿಂದ ಒಟ್ಟು 8.27 ಲಕ್ಷ ರೂ.ದಂಡ ವಸೂಲಿ ಮಾಡಲಾಗಿದೆ ಎಂದು ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕರು ತಿಳಿಸಿದ್ದಾರೆ.

ಸಂಸ್ಥೆ ತನಿಖಾ ತಂಡ ಒಟ್ಟು 19,862 ಟ್ರಿಪ್‌ಗಳನು ಪರಿಶೀಲಿಸಿದ್ದು, 5,046 ಮಂದಿ ಟಿಕೆಟ್ ರಹಿತ ಪ್ರಯಾಣಿಕರಿಂದ 8,27,700 ರೂ. ದಂಡ ವಸೂಲಿ ಮಾಡಲಾಗಿದೆ. ಇದೇ ವೇಳೆ 2,534 ಮಂದಿ ಸಂಸ್ಥೆ ನಿರ್ವಾಹಕರ ಮೇಲೆ ಪ್ರಕರಣ ದಾಖಲಿಸಲಾಗಿದೆ.

ಮಹಿಳಾ ಪ್ರಯಾಣಿಕರಿಗೆ ಮೀಸಲಿಟ್ಟ ಆಸನಗಳಲ್ಲಿ ಕುಳಿತು ಪ್ರಯಾಣಿಸುತ್ತಿದ್ದ 185 ಮಂದಿ ಪುರುಷ ಪ್ರಯಾಣಿಕರಿಂದ 18,500 ರೂ.ದಂಡ ವಸೂಲಿ ಮಾಡಲಾಗಿದೆ. ಟಿಕೆಟ್/ ಬಸ್ ಪಾಸ್ ಪಡೆದು ಪ್ರಯಾಣಿಸಿ, ಮಹಿಳೆಯರಿಗೆ ಮೀಸಲಿಟ್ಟ ಆಸನಗಳನ್ನು ಅವರಿಗೆ ಬಿಟ್ಟುಕೊಡಿ ಎಂದು ಸಂಸ್ಥೆ ಪ್ರಕಟಣೆ ಮನವಿ ಮಾಡಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News