ಜಮ್ಮು ಕಾಶ್ಮೀರ ಕಾಂಗ್ರೆಸ್, ನ್ಯಾಶನಲ್ ಕಾನ್ಫರೆನ್ಸ್ ಮೈತ್ರಿ

Update: 2019-03-20 18:15 GMT

ಜಮ್ಮುಕಾಶ್ಮೀರ, ಮಾ. 20: ಮುಂಬರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮತ್ತು ಜಮ್ಮು ಹಾಗೂ ಕಾಶ್ಮೀರ ನ್ಯಾಶನಲ್ ಕಾನ್ಫರೆನ್ಸ್ ಜಮ್ಮು ಹಾಗೂ ಕಾಶ್ಮೀರದಲ್ಲಿ ಚುನಾವಣಾ ಪೂರ್ವ ಮೈತ್ರಿ ಘೋಷಿಸಿದೆ.

ಜಮ್ಮು ಹಾಗೂ ಕಾಶ್ಮೀರದಲ್ಲಿ ಎಪ್ರಿಲ್ 11ರಿಂದ ಮೇ 19ರ ವರೆಗೆ ಚುನಾವಣೆ ನಡೆಯಲಿದೆ. ಮೇ 23ರಂದು ಫಲಿತಾಂಶ ಘೋಷಣೆಯಾಗಲಿದೆ.

ಜಮ್ಮು ಹಾಗೂ ಉಧಮ್‌ಪುರ ಕ್ಷೇತ್ರದಿಂದ ಕಾಂಗ್ರೆಸ್ ಸ್ಪರ್ಧಿಸಲಿದೆ ಎಂದು ನ್ಯಾಶನಲ್ ಕಾನ್ಫರೆನ್ಸ್‌ನ ಅಧ್ಯಕ್ಷ ಫಾರೂಕ್ ಅಬ್ದುಲ್ಲಾ ಹೇಳಿದ್ದಾರೆ. ಇನ್ನೊಂದೆಡೆಯಲ್ಲಿ ಅಬ್ದುಲ್ಲಾ ಅವರು ಶ್ರೀನಗರ ಕ್ಷೇತ್ರದ ಅಭ್ಯರ್ಥಿಯಾಗಲಿದ್ದಾರೆ.

ಅನಂತ್‌ನಾಗ್ ಹಾಗೂ ಬಾರಮುಲ್ಲಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಹಾಗೂ ನ್ಯಾಶನಲ್ ಕಾನ್ಫರೆನ್ಸ್ ಸ್ನೇಹಪೂರ್ವಕವಾಗಿ ಸ್ಪರ್ಧೆ ನಡೆಸಲಿದೆ. ನಾವು ಲಡಾಕ್ ಕ್ಷೇತ್ರದ ಬಗ್ಗೆ ಕೂಡ ಚರ್ಚೆ ನಡೆಸುತ್ತಿದ್ದೇವೆ ಎಂದು ಅಬ್ದುಲ್ಲಾ ಹೇಳಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News