ತಾಂತ್ರಿಕ ಶಿಕ್ಷಣ ಇಲಾಖೆ ನಿರ್ದೇಶಕ ತಳವಾರಗೆ ಫೆಲೋಶಿಪ್

Update: 2019-03-20 18:17 GMT

ಬೆಂಗಳೂರು, ಮಾ. 20: ರಾಜ್ಯ ತಾಂತ್ರಿಕ ಶಿಕ್ಷಣ ಇಲಾಖೆ ನಿರ್ದೇಶಕ ಎಚ್.ಯು.ತಳವಾರ ಅವರಿಗೆ ಇಂಡಿಯನ್ ಸೊಸೈಟಿ ಫಾರ್ ಟೆಕ್ನಿಕಲ್ ಎಜುಕೇಷನ್ ಫೆಲೋಶಿಪ್ ನೀಡಿ ಇತ್ತೀಚೆಗೆ ಗೌರವಿಸಿದೆ.

ತಳವಾರ ಅವರು 2009-10ರಲ್ಲಿ ತಾಂತ್ರಿಕ ಶಿಕ್ಷಣ ಕ್ಷೇತ್ರದಲ್ಲಿ ಸಲ್ಲಿಸಿದ ಸೇವೆಯನ್ನು ಪರಿಗಣಿಸಿದ ರಾಷ್ಟ್ರೀಯ ಸಂಸ್ಥೆ ಮೇಲ್ಕಂಡ ಫೆಲೋಶಿಪ್ ನೀಡಿದೆ. ಆ ಹಿನ್ನೆಲೆಯಲ್ಲಿ ರಾಜ್ಯ ಸರಕಾರಿ ಎಸ್ಸಿ-ಎಸ್ಟಿ ನೌಕರರ ಸಮನ್ವಯ ಸಮಿತಿ ಪ್ರಧಾನ ಕಾರ್ಯದರ್ಶಿ ಡಾ.ವಿಜಯಕುಮಾರ್ ಪ್ರಕಟಣೆಯಲ್ಲಿ ಅಭಿನಂದಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News