ವಿದ್ಯುತ್ ಶಾರ್ಟ್ ಸರ್ಕ್ಯೂಟ್: ಬೆಂಕಿಗಾಹುತಿಯಾದ ಮನೆ

Update: 2019-03-21 05:43 GMT

ಚಿಕ್ಕಮಗಳೂರು, ಮಾ.21: ಬೆಂಕಿ ಆಕಸ್ಮಿಕಕ್ಕೊಳಗಾಗಿ ಮನೆಯೊಂದು ಸಂಪೂರ್ಣ ಸುಟ್ಟು ಭಸ್ಮವಾದ ಘಟನೆ ತಾಲೂಕಿನ ಜೇನುಗದ್ದೆ ಎಂಬ ಗ್ರಾಮದಲ್ಲಿ ಬುಧವಾರ ಸಂಜೆ ನಡೆದಿದೆ.

ಜೇನುಗದ್ದೆ ಗ್ರಾಮದ ವಿಕ್ರಂ ಎಂಬವರಿಗೆ ಮನೆಯ ಇದಾಗಿದೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿರಬೇಕೆಂದು ಶಂಕಿಸಲಾಗಿದೆ. ಇದರಿಂದ ಉಂಟಾದ ಬೆಂಕಿಯಿಂದ ಮನೆ ಭಾಗಶಃ ಹಾನಿಗೀಡಾಗಿದೆ. ಲಕ್ಷಾಂತರ ರೂ. ಮೌಲ್ಯದ ಗೃಹೋಪಯೋಗಿ ಸಾಮಗ್ರಿಗಳು ಬೆಂಕಿಗಾಹುತಿಯಾಗಿವೆ.

ಈ ಬಗ್ಗೆ ಬಾಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Full View

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News