ನೀತಿ ಸಂಹಿತೆ ಉಲ್ಲಂಘನೆ ಆರೋಪ: ನಿಖಿಲ್ ಕುಮಾರಸ್ವಾಮಿ ವಿರುದ್ಧ ಚಿಕ್ಕಮಗಳೂರು ಡಿಸಿಗೆ ಬಿಜೆಪಿ ದೂರು

Update: 2019-03-21 12:34 GMT

ಚಿಕ್ಕಮಗಳೂರು, ಮಾ.21: ಮಂಡ್ಯ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರು ಇತ್ತೀಚೆಗೆ ಕುಟುಂಬ ಸಮೇತರಾಗಿ ಶೃಂಗೇರಿ ಮಠಕ್ಕೆ ಬಂದಿದ್ದ ಸಂಧರ್ಭದಲ್ಲಿ ಮಠದ ಆವರಣದಲ್ಲಿ ಪತ್ರಿಕಾ ವರದಿಗಾರರೊಂದಿಗೆ ಮಾತನಾಡಿದ್ದಾರೆ. ಇದು ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ ಆಗಿದೆ ಎಂದು ಜಿಲ್ಲಾ ವಕ್ತಾರ ವರಸಿದ್ಧಿ ವೇಣುಗೋಪಾಲ್ ತಿಳಿಸಿದ್ದಾರೆ.

ಇತ್ತೀಚೆಗೆ ಮುಖ್ಯಮಂತ್ರಿ ಕುಮಾರಸ್ವಾಮಿ ಮತ್ತು ಮಂಡ್ಯ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಎಂದೇ ಬಿಂಬಿತವಾಗಿರುವ ನಿಖಿಲ್ ಕುಮಾರಸ್ವಾಮಿ ಮತ್ತು ಕುಟುಂಬದವರ ಜೊತೆ ಶೃಂಗೇರಿ ಶಾರದಾ ಪೀಠಕ್ಕೆ ಆಗಮಿಸಿದ ಸಂಧರ್ಭದಲ್ಲಿ ಶಾರದ ಪೀಠದ ಆವರಣದಲ್ಲಿ ಮಾಧ್ಯಮದವರ ಜೊತೆ ಮಾತನಾಡಿ ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಮಾಡಿದ್ದಾರೆ. ಇವರ ವಿರುದ್ಧ ಬಿಜೆಪಿಯಿಂದ ಚುನಾವಣಾ ನೀತಿಸಂಹಿತೆ ಉಲ್ಲಂಘನೆಯ ದೂರು ದಾಖಲಿಸಿಕೊಳ್ಳುವಂತೆ ಜಿಲ್ಲಾಧಿಕಾರಿಯನ್ನು ಆಗ್ರಹಿಸಿದರು. 

ಈ ಸಂದರ್ಭದಲ್ಲಿ ಪಕ್ಷದ ಬಿಜೆಪಿ ನಗರಾಧ್ಯಕ್ಷ ಕೋಟೆ ರಂಗನಾಥ್, ಮಾಜಿ ತಾ.ಪಂ.ಸದಸ್ಯ ಹೆಚ್.ಎಸ್.ಪುಟ್ಟೇಗೌಡ, ಕೋಟೆ ದಿನೇಶ್, ನಗರ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಸಚಿನ್ ಮತ್ತಿತರರು ಈ ವೇಳೆ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News