ಆಳ್ವಾಸ್ ವಿದ್ಯಾರ್ಥಿಗಳ ಆತ್ಮಹತ್ಯೆ: ತನಿಖೆಗೆ ಆಗ್ರಹಿಸಿ ಎಸ್‌ಐಒ ಮನವಿ

Update: 2019-03-21 13:38 GMT

ಉಡುಪಿ, ಮಾ.21: ಮೂಡಬಿದ್ರೆಯ ಆಳ್ವಾಸ್ ಕಾಲೇಜಿನಲ್ಲಿ ವಿದ್ಯಾರ್ಥಿಗಳು ಆತ್ಮಹತ್ಯೆಗೆ ಗುರಿಯಾಗುತ್ತಿರುವ ಕಾರಣದ ಬಗ್ಗೆ ಕೂಲಂಕುಶ ತನಿಖೆ ನಡೆಸುವಂತೆ ಒತ್ತಾಯಿಸಿ ಎಸ್‌ಐಒ ಉಡುಪಿ ಜಿಲ್ಲೆ ಇದರ ವತಿಯಿಂದ ಇಂದು ಉಡುಪಿ ಜಿಲ್ಲಾಧಿಕಾರಿ ಹಸ್ಸೀಬಾ ರಾಣಿ ಕೊರ್ಲಪಾಟಿ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಯಿತು.

ಆಳ್ವಾಸ್ ಶಿಕ್ಷಣ ಸಂಸ್ಥೆಯಲ್ಲಿ ಕಳೆದ ಕೆಲವು ವರ್ಷಗಳಿಂದ ಹಲವು ವಿದ್ಯಾರ್ಥಿ ಗಳು ಆತ್ಮಹತ್ಯೆ ಮಾಡಿಕೊಂಡಿದ್ದು, ಈ ಆತ್ಮಹತ್ಯೆಗೆ ಕಾರಣ ಮಾತ್ರ ನಿಗೂಢ ವಾಗಿಯೇ ಉಳಿದಿವೆ. ದೇಶದ ವಿವಿಧ ಪ್ರದೇಶಗಳಿಂದ ಬಂದು ಸಾವಿರಾರು ವಿದ್ಯಾರ್ಥಿಗಳು ಈ ಶಿಕ್ಷಣ ಸಂಸ್ಥೆಯಲ್ಲಿ ಶಿಕ್ಷಣ ಪಡೆಯುತ್ತಿದ್ದು, ಈ ಸರಣಿ ಆತ್ಮಹತ್ಯೆಯು ಪೋಷಕರಲ್ಲಿ ಆತಂಕ ಮೂಡಿಸಿದೆ ಎಂದು ಮನವಿಯಲ್ಲಿ ಆರೋಪಿಸಲಾಗಿದೆ.

ಮಾ.18ರಂದು ಕಾಲೇಜಿನ ಹಾಸ್ಟೆಲ್‌ನಲ್ಲಿ ಪ್ರೀತಿ ಎಂಬ ವಿದ್ಯಾರ್ಥಿನಿ ನೇಣಿಗೆ ಶರಣಾಗಿದ್ದಾಳೆ. ಕಳೆದ ಕೆಲವಾರು ವರ್ಷಗಳಿಂದ ಹತ್ತಾರು ವಿದ್ಯಾರ್ಥಿ ಗಳು ಕಾಲೇಜಿನಲ್ಲೆ ಆತ್ಮಹತ್ಯೆಗೆ ಗುರಿಯಾಗಿದ್ದಾರೆ. ವಿದ್ಯಾಸಂಸ್ಥೆಯಲ್ಲಿ ಸಾಧನೆ ಹೆಸರಿನಲ್ಲಿ ವಿದ್ಯಾರ್ಥಿಗಳಿಗೆ ಒತ್ತಡ ಹೇರುತ್ತಿರುವುದೇ ಇದಕ್ಕೆ ಕಾರಣ ಎನ್ನ ಲಾಗಿದೆ. ಸರಕಾರ ತನಿಖೆ ನಡೆಸಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಗಳ ಕುಟುಂಬಗಳಿಗೆ ನ್ಯಾಯವನ್ನು ಒದಗಿಸುವುದರೊಂದಿಗೆ ಮುಂದೆ ಇಂತಹ ಘಟನೆ ಆಗದಂತೆ ಎಚ್ಚರಿಕೆಯ ಕ್ರಮಗಳನ್ನು ತೆಗೆದುೊಳ್ಳಬೇಕೆಂದು ಎಸ್‌ಐಓ ಒತ್ತಾಯಿಸಿದೆ.

ಈ ಸಂದರ್ಭದಲ್ಲಿ ಎಸ್‌ಐಒ ಉಡುಪಿ ಜಿಲ್ಲಾಧ್ಯಕ್ಷ ಅಫ್ವಾನ್ ಹೂಡೆ, ಜಿಲ್ಲಾ ಕಾರ್ಯದರ್ಶಿ ಮಹಮ್ಮದ್ ಶಾರೂಕ್, ಸದಸ್ಯರಾದ ಮಯಾನ್ ಮಲ್ಪೆ, ಫಾಝಿಲ್ ಉಡುಪಿ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News