×
Ad

ಇಂಜಿನಿಯರಿಂಗ್ ಕಾಲೇಜು ಉಪನ್ಯಾಸಕ ಆತ್ಮಹತ್ಯೆ

Update: 2019-03-21 20:50 IST

ಮೈಸೂರು,ಮಾ.21: ಇಂಜಿನಿಯರಿಂಗ್ ಕಾಲೇಜಿನ ಉಪನ್ಯಾಸಕರೋರ್ವರು ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೇಟಗಳ್ಳಿಯಲ್ಲಿ ನಡೆದಿದೆ.

ಮೃತರನ್ನು ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ದರಸಗುಪ್ಪೆ ನಿವಾಸಿ ಸಂತೋಷ್(25)ಎಂದು ಗುರುತಿಸಲಾಗಿದೆ. ನಗರದ ಖಾಸಗಿ ಕಾಲೇಜಿನಲ್ಲಿ ಉಪನ್ಯಾಸಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಇವರು ತಾನು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಸ್ನೇಹಿತರಿಗೆ ಫೋನ್ ಮೂಲಕ ತಿಳಿಸಿದ್ದರು ಎನ್ನಲಾಗಿದೆ. ಸ್ನೇಹಿತರು ಅವರಿದ್ದ ಸ್ಥಳಕ್ಕೆ ಬರುವಷ್ಟರಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.

ಈ ಸಂಬಂಧ ಮೇಟಗಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News