ನೀತಿ ಸಂಹಿತೆ ಉಲ್ಲಂಘನೆ: ನಗದು, ಮದ್ಯ ಸೇರಿ 23 ಕೋಟಿ ರೂ. ಮೌಲ್ಯದ ವಸ್ತು ಜಪ್ತಿ

Update: 2019-03-21 15:52 GMT
ಸಾಂದರ್ಭಿಕ ಚಿತ್ರ

ಬೆಂಗಳೂರು, ಮಾ. 21: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಚುನಾವಣಾ ಅಕ್ರಮಗಳ ಮೇಲೆ ಹದ್ದಿನ ಕಣ್ಣಿಟ್ಟಿರುವ ಚುನಾವಣಾ ಆಯೋಗ 1.83 ಕೋಟಿ ರೂ.ನಗದು ಸೇರಿದಂತೆ ಒಟ್ಟು 23 ಕೋಟಿ ರೂ.ಗಳಿಗೂ ಅಧಿಕ ಮೊತ್ತದ ಮದ್ಯ, ಮಾದಕ ದ್ರವ್ಯ, ವಾಹನಗಳು ಸೇರಿದಂತೆ ಇನ್ನಿತರ ವಸ್ತುಗಳನ್ನು ವಶಪಡಿಸಿಕೊಂಡಿದೆ.

ರಾಜ್ಯದಲ್ಲಿ ಒಟ್ಟು 1512 ಫ್ಲೈಯಿಂಗ್ ಸ್ಕ್ವಾಡ್ಸ್, 1837 ಸ್ಟಾಟಿಕ್ ಸರ್ವೆಲೆನ್ಸ್ ತಂಡಗಳು, 320 ಅಬಕಾರಿ ತಂಡಗಳು ಹಾಗೂ 180ಸ ವಾಣಿಜ್ಯ ತೆರಿಗೆ ಇಲಾಖೆ ತಂಡಗಳು ಕಾರ್ಯ ನಿರ್ವಹಿಸುತ್ತಿದ್ದು, 21 ಕೋಟಿ ರೂ.ಮೊತ್ತದ ಮದ್ಯ ವಶಪಡಿಸಿಕೊಂಡಿದೆ.

126 ಎಫ್‌ಐಆರ್‌ಗಳನ್ನು ಈವರೆಗೂ ದಾಖಲಿಸಿದ್ದು, 3 ಲಕ್ಷ ರೂ.ಗಳಿಗೂ ಅಧಿಕ ಮೊತ್ತದ 10 ಕೆಜಿ ಮಾದಕ ದ್ರವ್ಯಗಳನ್ನು ವಶಪಡಿಸಿಕೊಳ್ಳಲಾಗಿದೆ. ಚುನಾವಣಾ ಪ್ರಚಾರಕ್ಕೆ ಅನುಮತಿ ಇಲ್ಲದೆ ವಾಹನಗಳ ಬಳಕೆ ಸಂಬಂಧ 446 ವಾಹನಗಳನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ.

ಪರವಾನಗೆ ರದ್ದು: ಮುನ್ನಚ್ಚರಿಕೆ ಕ್ರಮವಾಗಿ ರಾಜ್ಯದಲ್ಲಿ 94,926 ಶಸ್ತ್ರಾಸ್ತ್ರಗಳನ್ನು ಜಮೆ ಮಾಡಿಸಿಕೊಳ್ಳಲಾಗಿದೆ. 298 ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡಿದ್ದು, 9 ಮಂದಿ ಶಸ್ತ್ರಾಸ್ತ್ರ ಪರವಾನಗೆಯನ್ನು ರದ್ದುಪಡಿಸಲಾಗಿದೆ. ಚುನಾವಣೆ ಘೋಷಣೆಯಾದ ಬಳಿಕ ಈವರೆಗೂ 19,533 ಜಾಮೀನು ರಹಿತ ವಾರೆಂಟ್‌ಗಳನ್ನು ಜಾರಿಗೊಳಿಸಲಾಗಿದೆ ಎಂದು ಆಯೋಗ ತಿಳಿಸಿದೆ.

2,200 ಗ್ಯಾಸ್ ಸ್ಟೌವ್‌ಗಳ ವಶ

‘ಧಾರವಾಡ ನಗರದಲ್ಲಿ ಮತದಾರರಿಗೆ ವಿತರಿಸುವ ಉದ್ದೇಶದಿಂದ ದಾಸ್ತಾನು ಮಾಡಲಾಗಿದ್ದ 16 ಲಕ್ಷ ರೂ.ಮೊತ್ತದ ಒಟ್ಟು 2,200 ಗ್ಯೌಸ್ ಸ್ಟೌವ್‌ಗಳನ್ನು ವಶಪಡಿಸಿಕೊಳ್ಳಲಾಗಿದ್ದು ಈ ಸಂಬಂಧ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ’

-ಸಂಜೀವ್ ಕುಮಾರ್, ಮುಖ್ಯ ಚುನಾವಣಾಧಿಕಾರಿ

50 ಅರ್ಜಿಗಳ ತಿರಸ್ಕಾರ:

‘ಚುನಾವಣಾ ಪ್ರಚಾರಕ್ಕೆ ಸಂಬಂಧಿಸಿದಂತೆ ಸುವಿಧಾ ಮೂಲಕ ಅನುಮತಿ ಕೋರಿ ಸ್ವೀಕರಿಸಲಾದ 367 ಅರ್ಜಿಗಳ ಪೈಕಿ 219 ಅರ್ಜಿಗಳಿಗೆ ಅನುಮತಿ ನೀಡಲಾಗಿದೆ. 12 ಅರ್ಜಿಗಳು ಪ್ರಗತಿಯಲ್ಲಿದ್ದು, 86 ಅರ್ಜಿಗಳು ವಿಲೇವಾರಿಗೆ ಬಾಕಿ ಇದೆ. ಹಾಗೂ 50 ಅರ್ಜಿಗಳನ್ನು ತಿರಸ್ಕರಿಸಲಾಗಿದೆ’

-ಸಂಜೀವ್ ಕುಮಾರ್, ಮುಖ್ಯ ಚುನಾವಣಾಧಿಕಾರಿ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News