ಎಸೆಸೆಲ್ಸಿ: ಪ್ರಥಮ ಭಾಷಾ ಪರೀಕ್ಷೆಗೆ ಉಡುಪಿ ಜಿಲ್ಲೆಯಲ್ಲಿ 171 ಗೈರು

Update: 2019-03-21 15:36 GMT

ಉಡುಪಿ, ಮಾ.21: ಜಿಲ್ಲೆಯ 51 ಪರೀಕ್ಷಾ ಕೇಂದ್ರಗಳಲ್ಲಿ ಈ ಬಾರಿಯ ಎಸೆಸೆಲ್ಸಿ ಪರೀಕ್ಷೆಗಳು ಇಂದು ಪ್ರಾರಂಭಗೊಂಡಿದ್ದು, ಮೊದಲ ದಿನ ನಡೆದ ಪ್ರಥಮ ಭಾಷಾ ಪರೀಕ್ಷೆಗೆ ಜಿಲ್ಲೆಯಲ್ಲಿ ಒಟ್ಟು 171 ಮಂದಿ ಗೈರುಹಾಜರಾಗಿದ್ದಾರೆ.

ಪರೀಕ್ಷೆಗೆ ಹೆಸರು ನೊಂದಾಯಿಸಿಕೊಂಡ 13,998 ಮಂದಿಯಲ್ಲಿ 13,827 ಮಂದಿ ಇಂದು ಹಾಜರಾಗಿದ್ದಾರೆ ಎಂದು ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪರೀಕ್ಷೆಗೆ ಹೆಸರು ನೊಂದಾಯಿಸಿಕೊಂಡ 13,553 ರೆಗ್ಯುಲರ್ ಹಾಗೂ ರೆಗ್ಯುಲರ್ ಪುನರಾವರ್ತಿತ ವಿದ್ಯಾರ್ಥಿಗಳಲ್ಲಿ 13,431 ಹಾಜರಾಗಿದ್ದು 122 ಮಂದಿ ಗೈರಾಗಿದ್ದಾರೆ. ಅದೇ ರೀತಿ 445 ಮಂದಿ ಖಾಸಗಿ ವಿದ್ಯಾರ್ಥಿಗಳಲ್ಲಿ 49 ಮಂದಿ ಗೈರಾಗಿ 396 ಮಂದಿ ಪರೀಕ್ಷೆ ಬರೆದಿದ್ದಾರೆ ಎಂದವರು ತಿಳಿಸಿದ್ದಾರೆ.

ಜಿಲ್ಲೆಯ ಯಾವುದೇ ಪರೀಕ್ಷಾ ಕೇಂದ್ರಗಳಲ್ಲೂ ಅವ್ಯವಹಾರ, ಅಕ್ರಮಗಳು ನಡೆದ ಬಗ್ಗೆ ವರದಿಯಾಗಿಲ್ಲ ಎಂದು ಡಿಡಿಪಿಐ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News