ಹೋಳಿ ಮೆರವಣಿಗೆ: ಮದ್ಯ ಮಾರಾಟ ನಿಷೇಧ

Update: 2019-03-21 15:39 GMT

ಉಡುಪಿ, ಮಾ.21: ಕುಂದಾಪುರ ಉಪ ವಿಭಾಗದ ಸರಹದ್ದಿನಲ್ಲಿ ಹೋಳಿ ಹಬ್ಬದ ಪ್ರಯುಕ್ತ ಖಾರ್ವಿ ಸಮಾಜದವರಿಂದ ಮಾ.22ರಂದು ಹೋಳಿ ಮೆರವಣಿಗೆ ನಡೆಯಲಿದ್ದು, ಈ ಸಂದಭರ್ದಲ್ಲಿ ಸಾರ್ವಜನಿಕ ಶಾಂತಿ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಕುಂದಾಪುರ ನಗರ ಠಾಣಾ ವ್ಯಾಪ್ತಿ ಯ ಕುಂದಾಪುರ ಕಸಬಾ ಗ್ರಾಮದ ಖಾರ್ವಿಕೇರಿಯ ಶ್ರೀಮಹಾಕಾಳಿ ದೇವಸ್ಥಾನದಿಂದ 2 ಕಿ.ಮೀ ವ್ಯಾಪ್ತಿಯಲ್ಲಿ ಹಾಗೂ ಗಂಗೊಳ್ಳಿ ಠಾಣಾ ವ್ಯಾಪ್ತಿ ಯ ಗ್ರಾಮಗಳಾದ ಗಂಗೊಳ್ಳಿ, ಗುಜ್ಜಾಡಿ, ಹೊಸಾಡು ಮತ್ತು ತ್ರಾಸಿ ವ್ಯಾಪ್ತಿಯಲ್ಲಿ ಮಾ.22ರ ಬೆಳಗ್ಗೆ 6 ಗಂಟೆಯಿಂದ 23ರ ಬೆಳಗ್ಗೆ 6 ಗಂಟೆಯವರೆಗೆ ಮದ್ಯ ಮಾರಾಟವನ್ನು ನಿಷೇಧಿಸಲಾಗಿದೆ.

ಮದ್ಯ ಮಾರಾಟದ ಸನ್ನದುಗಳನ್ನು ಹೊಂದಿರುವ ಬಾರ್, ರೆಸ್ಟೋರೆಂಟ್ ಮತ್ತು ವೈನ್‌ಶಾಪ್‌ಗಳಲ್ಲಿ ಮದ್ಯ ಮಾರಾಟವನ್ನು, ಅಬಕಾರಿ ಸನ್ನದುಗಳನ್ನು ಮುಚ್ಚಲು ಆದೇಶಿಸಲಾಗಿದ್ದು, ಕುಂದಾಪುರ ಪೊಲೀಸ್ ಉಪ ವಿಬಾಗದ ಕುಂದಾಪುರ ನಗರ ಹಾಗೂ ಗಂಗೊಳ್ಳಿ ಠಾಣಾ ಸರಹದ್ದಿನ ಗ್ರಾಮಗಳ ವ್ಯಾಪ್ತಿಯಲ್ಲಿ ಒಣದಿನ ಎಂದು ಘೋಷಿಸಿ ಮದ್ಯ ಮಾರಾಟವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಆದೇಶ ಹೊರಡಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News