ಉಡುಪಿ: ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿ ಮತದಾನ ಪ್ರಾತ್ಯಕ್ಷಿಕೆ

Update: 2019-03-21 15:41 GMT

ಉಡುಪಿ, ಮಾ.21: ಉಡುಪಿ ಡಿ.ದೇವರಾಜ ಅರಸು ಮೆಟ್ರಿಕ್ ನಂತರದ ವೃತ್ತಿಪರ ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿ ಬುಧವಾರ ನಿಲಯದ ವಿದ್ಯಾರ್ಥಿ ನಿಯರಿಗೆ ಉಡುಪಿ ಜಿಲ್ಲಾ ಸ್ವೀಪ್ ಸಮಿತಿಯ ಅಧ್ಯಕ್ಷೆ ಸಿಂಧೂ.ಬಿ ರೂಪೇಶ್ ಮತದಾನ ಜಾಗೃತಿಯ ಬಗ್ಗೆ ಅರಿವು ಮೂಡಿಸಿ, ಮುಂಬರುವ ಚುನಾವಣೆಯಲ್ಲಿ ನಿರ್ಭೀತಿಯಿಂದ ಮತದಾನದಲ್ಲಿ ಬಾಗವಹಿಸುವಂತೆ ಕರೆ ನೀಡಿದರು.

ಈ ಸಂದರ್ಭದಲ್ಲಿ ಉಡುಪಿ ತಾಪಂ ಕಾರ್ಯ ನಿರ್ವಹಣಾಧಿಕಾರಿ ರಾಜು ಮಾತನಾಡಿ, ವಿದ್ಯಾರ್ಥಿಗಳಿಗೆ ಮತದಾನ ಮಾಡುವ ಕುರಿತು ಪ್ರತಿಜ್ಞಾ ವಿಧಿ ಯನ್ನು ಬೋದಿಸಿ, ನಂತರದಲ್ಲಿ ಮತ ಯಂತ್ರ ಹಾಗೂ ವಿವಿಪ್ಯಾಟ್ ಬಗ್ಗೆ ಪ್ರಾತ್ಯಕ್ಷಿಕೆ ನೀಡಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ಹಾಕಪ್ಪಲಮಾಣಿ ಭಾಗವಹಿಸಿದರು. ತಾಲೂಕು ಹಿಂದುಳಿದ ವರ್ಗಗಳ ವಿಸ್ತರಣಾಧಿಕಾರಿ ಜಿ.ಗಿರಿಧರ ಗಾಣಿಗ ಸ್ವಾಗತಿಸಿ, ನಿಲಯದ ವಿದ್ಯಾರ್ಥಿನಿ ಅನ್ನಪೂರ್ಣ ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News