ಸಿಎ ನಿವೇಶನ ಮಂಜೂರು ಮಾಡಿಸಿದ ಪ್ರಕರಣ: ಸಿ.ಟಿ.ರವಿ ವಿರುದ್ಧದ ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್

Update: 2019-03-21 15:50 GMT

ಬೆಂಗಳೂರು, ಮಾ.21: ಕರ್ನಾಟಕ ಗೃಹ ಮಂಡಳಿ ವತಿಯಿಂದ ಸಿಎ ನಿವೇಶನ ಮಂಜೂರು ಮಾಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಸಿ.ಟಿ.ರವಿ ವಿರುದ್ಧ ದಾಖಲಾಗಿದ್ದ ಖಾಸಗಿ ದೂರನ್ನು ಹೈಕೋರ್ಟ್ ರದ್ದುಗೊಳಿಸಿ ಆದೇಶಿಸಿದೆ.

ಈ ಕುರಿತು ಖಾಸಗಿ ದೂರು ರದ್ದು ಕೋರಿ ಸಿ.ಟಿ.ರವಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಪಿ.ಎಸ್.ದಿನೇಶ್‌ಕುಮಾರ್ ಅವರಿದ್ದ ನ್ಯಾಯಪೀಠ ನಡೆಯಿತು. ಮಾಜಿ ಸಚಿವ ಸಿ.ಟಿ.ರವಿ ಅವರು ತಮ್ಮ ಅಧಿಕಾರದ ಪ್ರಭಾವ ಬಳಸಿ ಪತ್ನಿ ಮಾಲಕತ್ವದ ಶಾಲೆಗೆ ಸಿಎ ನಿವೇಶನ ಜಾರಿಗೊಳಿಸಲು ಕರ್ನಾಟಕ ಗೃಹ ಮಂಡಳಿಗೆ ಸೂಚಿಸಿದ್ದಾರೆ ಎಂದು ಆರೋಪ ಕೇಳಿ ಬಂದಿತ್ತು. ಈ ಹಿನ್ನೆಲೆಯಲ್ಲಿ ಲೋಕಾಯುಕ್ತ ಕೋರ್ಟ್‌ಗೆ ಸಿಟಿ ರವಿ ವಿರುದ್ಧ ಖಾಸಗಿ ದೂರು ದಾಖಲಾಗಿತ್ತು.

ತನಿಖೆ ನಡೆಸಿದ್ದ ಲೋಕಾಯುಕ್ತ ಪೊಲೀಸರು ಲೋಕಾಯುಕ್ತ ಕೋರ್ಟ್‌ಗೆ ಬಿ ರಿಪೋರ್ಟ್ ಸಲ್ಲಿಸಿದ್ದರು. ಆದರೆ, ಲೋಕಾಯುಕ್ತ ಕೋರ್ಟ್ ಬಿ.ರಿಪೋರ್ಟ್ ತಿರಸ್ಕರಿಸಿ ಸಿ.ವಿ.ರವಿ ವಿರುದ್ಧ ಸಮನ್ಸ್ ಜಾರಿಗೊಳಿಸಿತ್ತು. ಇದನ್ನು ಪ್ರಶ್ನಿಸಿ ರವಿ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು. ಗುರುವಾರ ಅರ್ಜಿ ವಿಚಾರಣೆ ನಡೆಸಿದ ನ್ಯಾಯಪೀಠವು ಸಿ.ಟಿ.ರವಿ, ಪತ್ನಿ ಪಲ್ಲವಿ ರವಿ, ಸುದರ್ಶನ್, ತೇಜಸ್ವಿನಿ ವಿರುದ್ಧದ ದೂರು ರದ್ದುಗೊಳಿಸಿ ಆದೇಶಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News