ಸರಕು ವಾಹನಗಳಲ್ಲಿ ಜನರನ್ನು ಸಾಗಿಸುವುದನ್ನು ನಿಷೇಧಿಸಲು ಕೋರಿ ಅರ್ಜಿ: ಸರಕಾರಕ್ಕೆ ಹೈಕೋರ್ಟ್ ನೋಟಿಸ್

Update: 2019-03-21 15:59 GMT

ಬೆಂಗಳೂರು, ಮಾ.21: ರಾಜ್ಯದಲ್ಲಿ ಮಕ್ಕಳು, ವಿದ್ಯಾರ್ಥಿಗಳು, ಕಾರ್ಮಿಕರನ್ನು ಸರಕು ವಾಹನಗಳಲ್ಲಿ ಸಾಗಿಸುವುದನ್ನು ನಿಷೇಧಿಸಬೇಕೆಂದು ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ ಸರಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ.

ಈ ಕುರಿತು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ(ಕೆಎಸ್‌ಎಲ್‌ಎಸ್‌ಎ) ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಎಲ್.ನಾರಾಯಣಸ್ವಾಮಿ ಹಾಗೂ ನ್ಯಾಯಮೂರ್ತಿ ಪಿ.ಎಸ್.ದಿನೇಶ್‌ಕುಮಾರ್ ಅವರಿದ್ದ ವಿಭಾಗೀಯ ನ್ಯಾಯಪೀಠದಲ್ಲಿ ನಡೆಯಿತು.  ಅರ್ಜಿದಾರರ ಪರ ವಾದಿಸಿದ ವಕೀಲ ಕ್ಲಿಫ್ಟನ್ ಡಿ. ರೊಝರಿಯೊ ಅವರು, ವಾಹನಗಳ ಮಾಲಕರು ಕಾನೂನನ್ನು ಉಲ್ಲಂಘಿಸಿ ಮಕ್ಕಳು, ವಿದ್ಯಾರ್ಥಿಗಳು, ಕಾರ್ಮಿಕರು ಹಾಗೂ ಜನರನ್ನು ಸರಕು ವಾಹನಗಳಲ್ಲಿ ಸಾಗಿಸುತ್ತಿದ್ದಾರೆ. ಇದರಿಂದ, ಅಪಘಾತಗಳು ಸಂಭವಿಸಿ ಸಾಕಷ್ಟು ಸಾವುಗಳು ಹಾಗೂ ಗಾಯಗಳಾಗಿ ಅಂಗವೈಕಲ್ಯಕ್ಕೆ ಒಳಗಾಗಿದ್ದಾರೆ. ಹೀಗಾಗಿ, ಇಂತಹ ಅವಘಡಗಳನ್ನು ತಡೆಗಟ್ಟಲು ಸಂಬಂಧಪಟ್ಟ ಇಲಾಖೆಗಳಿಗೆ ನಿರ್ದೇಶನ ನೀಡಬೇಕೆಂದು ಪೀಠಕ್ಕೆ ಮನವಿ ಮಾಡಿದರು. 

ವಕೀಲರ ವಾದ ಆಲಿಸಿದ ನ್ಯಾಯಪೀಠವು ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ, ಸಾರಿಗೆ ಇಲಾಖೆಯ ಪ್ರಧಾನ ಕಾರ್ಯದರ್ಶಿ, ಸಾರಿಗೆ ಇಲಾಖೆಯ ಆಯುಕ್ತರಿಗೆ ನೋಟಿಸ್ ಜಾರಿಗೊಳಿಸಿ ವಿಚಾರಣೆಯನ್ನು ಮುಂದೂಡಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News