ದಕ್ಷಿಣ ಕನ್ನಡ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ : ದಿಲ್ಲಿಯಲ್ಲಿ ಬಿರುಸಿನ ಚರ್ಚೆ

Update: 2019-03-21 16:41 GMT

ಮಂಗಳೂರು , ಮಾ. 21 :  ದಕ್ಷಿಣ ಕನ್ನಡ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಕುರಿತು ಗುರುವಾರ ದಿಲ್ಲಿಯಲ್ಲಿ ರಾಜ್ಯ ಉಸ್ತುವಾರಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಅವರ ನಿವಾಸದಲ್ಲಿ ಸಭೆ ನಡೆದಿದ್ದು ಎಲ್ಲ ಆಕಾಂಕ್ಷಿಗಳು ಮತ್ತು ಜಿಲ್ಲೆಯ ನಾಯಕರು ಭಾಗವಹಿಸಿದ್ದರು. 

ಗುರುವಾರ ತಡರಾತ್ರಿ ಅಭ್ಯರ್ಥಿ ಯಾರು ಎಂಬ ಬಗ್ಗೆ ಹೈಕಮಾಂಡ್ ನಿರ್ಧಾರಕ್ಕೆ ಬರಲಿದ್ದು, ಶುಕ್ರವಾರದ ಕೇಂದ್ರ ಚುನಾವಣಾ ಸಮಿತಿ ಸಭೆ ಬಳಿಕ ಘೋಷಣೆಯಾಗಲಿದೆ ಎಂದು ತಿಳಿದುಬಂದಿದೆ.

ರಮಾನಾಥ ರೈ , ವಿನಯ್ ಕುಮಾರ್ ಸೊರಕೆ, ಬಿ ಕೆ ಹರಿಪ್ರಸಾದ್ ಹಾಗು ಮಿಥುನ್ ರೈ ಅವರು ಟಿಕೆಟ್ ಸ್ಪರ್ಧೆಯಲ್ಲಿ ಮುಂಚೂಣಿಯಲ್ಲಿದ್ದಾರೆ .

ಟಿಕೆಟ್ ಆಕಾಂಕ್ಷಿಗಳಾದ ರಮಾನಾಥ ರೈ, ಬಿ ಕೆ ಹರಿಪ್ರಸಾದ್, ವಿನಯ್ ಕುಮಾರ್ ಸೊರಕೆ,  ಕಣಚೂರು ಮೋನು, ಮಿಥುನ್ ರೈ, ಮಮತಾ ಗಟ್ಟಿ, ಧನಂಜಯ ಅಡ್ಪಂಗಾಯ,ಡಿಸಿಸಿ ಅಧ್ಯಕ್ಷ ಹರೀಶ್ ಕುಮಾರ್, ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್, ಜಿಲ್ಲೆಯ ಎಲ್ಲ ಪರಾಜಿತ ಕಾಂಗ್ರೆಸ್ ಶಾಸಕರು ಸಭೆಯಲ್ಲಿ ಪಾಲ್ಗೊಂಡಿದ್ದರು.

ಯಾರೇ ಅಭ್ಯರ್ಥಿಯಾದರೂ ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡಿ ಈ ಬಾರಿ ದಕ್ಷಿಣ ಕನ್ನಡ ಕ್ಷೇತ್ರವನ್ನು ಗೆಲ್ಲಬೇಕು ಎಂದು ವೇಣುಗೋಪಾಲ್ ಎಲ್ಲ ಮುಖಂಡರಿಗೆ ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News