×
Ad

ದ.ಕ.ಲೋಕಸಭಾ ಕ್ಷೇತ್ರ: ಮೂರನೆ ದಿನವೂ ನಾಮಪತ್ರವಿಲ್ಲ

Update: 2019-03-21 22:05 IST

ಮಂಗಳೂರು, ಮಾ.21: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರಕ್ಕೆ ಗುರುವಾರವೂ ಯಾವುದೇ ನಾಮಪತ್ರ ಸಲ್ಲಿಕೆಯಾಗಿಲ್ಲ.

ನಾಮಪತ್ರ ಸಲ್ಲಿಕೆಯ ಮೊದಲ ದಿನವಾದ ಮಂಗಳವಾರ ಲೋಕತಾಂತ್ರಿಕ ಜನತಾ ದಳ ಪಕ್ಷದ ಅಭ್ಯರ್ಥಿಯಾಗಿ ಸುಪ್ರೀತ್ ಪೂಜಾರಿ ನಾಮಪತ್ರ ಸಲ್ಲಿಸಿದ್ದರು. ಬುಧವಾರ ಮತ್ತು ಗುರುವಾರ ಯಾವುದೇ ನಾಮಪತ್ರ ಸಲ್ಲಿಕೆಯಾಗಿಲ್ಲ. ಹಾಗಾಗಿ ಈವರೆಗೆ ಕೇವಲ ಒಂದು ನಾಮಪತ್ರ ಮಾತ್ರ ಸಲ್ಲಿಕೆಯಾಗಿದೆ.

ರವಿವಾರ ಬಹಿರಂಗ ಸಮಾವೇಶ ನಡೆಸಿ ಅಭ್ಯರ್ಥಿಯ ಹೆಸರನ್ನು ಘೋಷಿಸಿರುವ ಎಸ್‌ಡಿಪಿಐ ಮಾ.25ರ ಸೋಮವಾರ ನಾಮಪತ್ರ ಸಲ್ಲಿಸಲಿದೆ. ಕಾಂಗ್ರೆಸ್ ಮತ್ತು ಬಿಜೆಪಿ ಇನ್ನೂ ಅಧಿಕೃತವಾಗಿ ಅಭ್ಯರ್ಥಿಯ ಹೆಸರನ್ನು ಘೋಷಿಸಿಲ್ಲ. ನಾಮಪತ್ರ ಸಲ್ಲಿಕೆಗೆ ಮಾ.26ರ ಮಂಗಳವಾರ ಕೊನೆಯ ದಿನವಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News