ಲೋಕಸಭಾ ಚುನಾವಣೆ: ಅಮೇಠಿಯಲ್ಲಿ ಮತ್ತೊಮ್ಮೆ ರಾಹುಲ್ ವಿರುದ್ಧ ಸ್ಮೃತಿ ಇರಾನಿ

Update: 2019-03-21 16:58 GMT

ಹೊಸದಿಲ್ಲಿ, ಮಾ.21: ಲೋಕಸಭಾ ಚುನಾವಣೆ ಮುಂದಿನ ತಿಂಗಳು ಆರಂಭವಾಗಲಿದ್ದು, ಬಿಜೆಪಿಯು 184 ಅಭ್ಯರ್ಥಿಗಳ ಪ್ರಥಮ ಪಟ್ಟಿ ಬಿಡುಗಡೆಗೊಳಿಸಿದೆ.

ಕಾಂಗ್ರೆಸ್ ನ ಭದ್ರಕೋಟೆಯಾಗಿರುವ ಉತ್ತರ ಪ್ರದೇಶದ ಅಮೇಠಿಯಿಂದ ಸ್ಮೃತಿ ಇರಾನಿ ಸ್ಪರ್ಧಿಸಲಿದ್ದು, 2ನೆ ರಾಹುಲ್ ಗಾಂಧಿ ವಿರುದ್ಧ ಸೆಣಸಲಿದ್ದಾರೆ. 2014ರಲ್ಲಿ 1 ಲಕ್ಷಕ್ಕೂ ಹೆಚ್ಚು ಮತಗಳ ಅಂತರದಲ್ಲಿ ಸ್ಮೃತಿ ಇರಾನಿ ರಾಹುಲ್ ವಿರುದ್ಧ ಸೋಲನುಭವಿಸಿದ್ದರು.

ಅಮೇಠಿಯನ್ನು ರಾಹುಲ್ ಗಾಂಧಿ ವೋಟ್ ಬ್ಯಾಂಕ್ ಗಾಗಿ ಮಾತ್ರ ಬಳಸುತ್ತಿದ್ದಾರೆ ಹೊರತು ಯಾವುದೇ ಅಭಿವೃದ್ಧಿ ಕೆಲಸಗಳನ್ನು ಮಾಡಿಲ್ಲ ಎಂದು ಸ್ಮೃತಿ ಆರೋಪಿಸಿದ್ದರು. 2009ರಲ್ಲಿ ರಾಹುಲ್ 3.70 ಲಕ್ಷ ಮತಗಳ ಅಂತರದಲ್ಲಿ ಅಮೇಠಿಯಲ್ಲಿ ಜಯ ಗಳಿಸಿದ್ದರು.

ಬಿಜೆಪಿ ಬಿಡುಗಡೆ ಮಾಡಿದ 184 ಅಭ್ಯರ್ಥಿಗಳ ಪಟ್ಟಿಯಲ್ಲಿ ಪಕ್ಷದ ವರಿಷ್ಠ, ಹಿರಿಯ ನಾಯಕ ಎಲ್.ಕೆ. ಅಡ್ವಾಣಿ ಹೆಸರಿಲ್ಲದಿರುವುದು ಎಲ್ಲರ ಅಚ್ಚರಿಗೆ ಕಾರಣವಾಗಿದೆ. ಅಡ್ವಾಣಿಯವರ ಗಾಂಧಿನಗರ ಕ್ಷೇತ್ರದಿಂದ ಪಕ್ಷದ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಸ್ಪರ್ಧಿಸಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News