×
Ad

ದ.ಕ.ಲೋಕಸಭಾ ಕ್ಷೇತ್ರ: ನಾಲ್ಕನೆ ದಿನ ಎರಡು ನಾಮಪತ್ರ ಸಲ್ಲಿಕೆ

Update: 2019-03-22 18:15 IST

ಮಂಗಳೂರು, ಮಾ.22: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರಕ್ಕೆ ಶುಕ್ರವಾರ ಎರಡು ನಾಮಪತ್ರ ಸಲ್ಲಿಕೆಯಾಗಿದೆ. ಉತ್ತಮ ಪ್ರಜಾಕೀಯ ಪಕ್ಷದಿಂದ ವಿಜಯಶ್ರೀನಿವಾಸ ಸಿ ಮತ್ತು ಪಕ್ಷೇತರ ಅಭ್ಯರ್ಥಿಯಾಗಿ ದೀಪಕ್ ರಾಜೇಶ್ ಕುವೆಲ್ಲೋ ನಾಮಪತ್ರ ಸಲ್ಲಿಸಿದ್ದಾರೆ. ಇದರೊಂದಿಗೆ ಈ ಕ್ಷೇತ್ರದಲ್ಲಿ ಮೂವರು ನಾಮಪತ್ರ ಸಲ್ಲಿಸಿದ್ದಾರೆ.

ಮೊದಲ ದಿನವಾದ ಮಂಗಳವಾರ ಲೋಕತಾಂತ್ರಿಕ ಜನತಾ ದಳ ಪಕ್ಷದ ಅಭ್ಯರ್ಥಿಯಾಗಿ ಸುಪ್ರೀತ್ ಪೂಜಾರಿ ನಾಮಪತ್ರ ಸಲ್ಲಿಸಿದ್ದರು. ಬುಧವಾರ ಮತ್ತು ಗುರುವಾರ ಯಾವುದೇ ನಾಮಪತ್ರ ಸಲ್ಲಿಕೆಯಾಗಿರಲಿಲ್ಲ. ನಾಲ್ಕನೆ ದಿನವಾದ ಶುಕ್ರವಾರ ಎರಡು ನಾಮಪತ್ರ ಸಲ್ಲಿಕೆಯಾಗಿದೆ. ಮಾ.26ರ ಮಂಗಳವಾರ ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News