ನಿಖಿಲ್ ನಾಮಪತ್ರ ಸಲ್ಲಿಕೆ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಜೊತೆಗಿರಬೇಕು: ಡಿ.ಕೆ.ಶಿವಕುಮಾರ್

Update: 2019-03-22 14:14 GMT

ಬೆಂಗಳೂರು, ಮಾ.22: ಮಂಡ್ಯ ಲೋಕಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಸೋಮವಾರ(ಮಾ.25) ನಾಮಪತ್ರ ಸಲ್ಲಿಸಲಿದ್ದಾರೆ. ಈ ವೇಳೆ ಕಾಂಗ್ರೆಸ್ ಸ್ಥಳೀಯ ನಾಯಕರು, ಕಾಂಗ್ರೆಸ್ ನಾಯಕರು ಜೊತೆಗಿರಬೇಕೆಂದು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಎಸ್-ಕಾಂಗ್ರೆಸ್ ನಾಯಕರು ಒಟ್ಟಾಗಿ ಒಮ್ಮತದ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿಯನ್ನು ನಿಲ್ಲಿಸಿದ್ದೇವೆ. ಹೀಗಾಗಿ ಎರಡು ಪಕ್ಷದ ಕಾರ್ಯಕರ್ತರು ಜೆಡಿಎಸ್ ಅಭ್ಯರ್ಥಿಯ ಪರವಾಗಿ ಕೆಲಸ ಮಾಡಬೇಕಿದೆ ಎಂದು ತಿಳಿಸಿದರು.

ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಕುರಿತು ಮಾತನಾಡಿದ ಅವರು, ಈ ಕ್ಷೇತ್ರದಲ್ಲಿ ಕಾಂಗ್ರೆಸ್‌ಗೆ ವಿರುದ್ಧವಾಗಿ ಬಿಜೆಪಿಯಿಂದ ಯೋಗೇಶ್ವರ್ ಅವರಾದರು ನಿಲ್ಲಲಿ, ಅವರ ಮಗಳಾದರು ಸ್ಪರ್ಧಿಸಲಿ. ಯಾರೇ ಸ್ಪರ್ಧಿಸಿದರು ಸ್ವಾಗತ. ಬಿಜೆಪಿ ಅಭ್ಯರ್ಥಿಗಳ ಬಗ್ಗೆ ಚಿಂತಿಸುವಷ್ಟು ಸಮಯವಿಲ್ಲವೆಂದು ತಿಳಿಸಿದರು.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ ಆಡಳಿತದಲ್ಲಿ ದೇಶದ ಜನತೆ ಸಾಕಷ್ಟು ಸಂಕಷ್ಟನ್ನು ಎದುರಿಸುವಂತಾಗಿದೆ. ಜಿಎಸ್‌ಟಿಯಿಂದ ಸಣ್ಣ, ಮಧ್ಯಮ ವ್ಯಾಪಾರಿಗಳಿಗೆ ಹಲವು ಸಮಸ್ಯೆಗಳನ್ನು ಎದುರಿಸುವಂತಾಗಿದೆ. ನಿರುದ್ಯೋಗವನ್ನು ನಿವಾರಿಸುವ ನಿಟ್ಟಿನಲ್ಲಿ ಕಿಂಚಿತ್ತೂ ಕೆಲಸ ಮಾಡಿಲ್ಲ. ಹೀಗಾಗಿ ದೇಶದ ಜನತೆ ಬಿಜೆಪಿ ವಿರುದ್ದವಾಗಿ ಕಾಂಗ್ರೆಸ್ ಮತ ಹಾಕಲಿದ್ದಾರೆ.

-ಡಿ.ಕೆ.ಶಿವಕುಮಾರ್, ಜಲಸಂಪನ್ಮೂಲ ಸಚಿವ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News