ಸುಮಲತಾ ಬೆಂಬಲಿಸಿದ ಕೆಪಿಸಿಸಿ ಸದಸ್ಯ ಅಮಾನತು

Update: 2019-03-22 14:25 GMT

ಬೆಂಗಳೂರು, ಮಾ.22: ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಹಿರಿಯ ನಟಿ ಸುಮಲತಾ ಅಂಬರೀಷ್ ಬೆಂಬಲಕ್ಕೆ ನಿಂತಿರುವ ಕೆಪಿಸಿಸಿ ಸದಸ್ಯ ಸಚ್ಚಿದಾನಂದ ಹಿಂಡವಾಳು ಅವರನ್ನು ಪಕ್ಷದಿಂದ ಅಮಾನತು ಮಾಡಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ವಿ.ವೈ.ಘೋರ್ಪಡೆ ಆದೇಶ ಹೊರಡಿಸಿದ್ದಾರೆ.

ಕಳೆದ ಕೆಲವು ದಿನಗಳಿಂದ ಸಚ್ಚಿದಾನಂದ ಪಕ್ಷೇತರ ಅಭ್ಯರ್ಥಿ ಸುಮಲತಾ ಅವರನ್ನು ಬೆಂಬಲಿಸುತ್ತಿದ್ದರು. ಇದರಿಂದ ಸಚ್ಚಿದಾನಂದ ಪಕ್ಷ ವಿರೋಧಿ ಚಟುವಟಿಕೆಯಲ್ಲಿ ಭಾಗವಹಿಸಿದ್ದಾರೆ ಎಂಬ ದೂರು ಬಂದ ಹಿನ್ನೆಲೆಯಲ್ಲಿ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ, ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಛಾಟನೆ ಮಾಡಲಾಗಿದೆ ಎಂದು ಘೋರ್ಪಡೆ ಪತ್ರದಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News