ಉಪ್ಪಿನಂಗಡಿ: ಕೆಎಸ್ಸಾರ್ಟಿಸಿ ಬಸ್ ಡಿಕ್ಕಿ; ಬೈಕ್ ಸವಾರ ಸಾವು

Update: 2019-03-22 14:34 GMT

ಉಪ್ಪಿನಂಗಡಿ: ಕೆಎಸ್ಸಾರ್ಟಿಸಿ ಬಸ್ಸೊಂದು ಬೈಕ್‍ಗೆ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಉದನೆ ಬಳಿ ಶುಕ್ರವಾರ ಸಂಜೆ ನಡೆದಿದೆ.

ನೆಲ್ಯಾಡಿ ಬಳಿಯ ಕೊಪ್ಪ ಮಾದೇರಿ ನಿವಾಸಿ ಉಮೇಶ್ ಗೌಡ (55) ಮೃತ ಬೈಕ್ ಸವಾರ. ಉಮೇಶ್ ಅವರು ಶಿರಾಡಿ ಗಡಿಯಲ್ಲಿ ಕ್ಯಾಂಟೀನ್ ಹೊಂದಿದ್ದು, ಕ್ಯಾಂಟೀನ್ ಮುಚ್ಚಿ ಮನೆಯತ್ತ ಬರುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ಉದನೆ ಬಳಿ ಇವರ ಬೈಕ್‍ಗೆ ಮುಖಾಮುಖಿ ಢಿಕ್ಕಿಯಾಗಿದ್ದು, ಅಪಘಾತದ ರಭಸಕ್ಕೆ ರಸ್ತೆಗೆಸೆಯಲ್ಪಟ್ಟ ಇವರ ತಲೆಗೆ ಗಂಭೀರ ಗಾಯವಾಗಿದ್ದು, ಇವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತರು ಪತ್ನಿ, ಇಬ್ಬರು ಪುತ್ರರು ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News