ಸಚಿವ ಶಿವಳ್ಳಿ ನಿಧನ: ಮಾ.23 ರಂದು ಧಾರವಾಡ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

Update: 2019-03-22 14:36 GMT
ಸಚಿವ ಸಿ.ಎಸ್.ಶಿವಳ್ಳಿ

ಬೆಂಗಳೂರು, ಮಾ. 22: ಪೌರಾಡಳಿತ ಸಚಿವ ಸಿ.ಎಸ್.ಶಿವಳ್ಳಿ ಅವರ ನಿಧನದ ಹಿನ್ನೆಲೆಯಲ್ಲಿ ಧಾರವಾಡ ಜಿಲ್ಲೆಯಲ್ಲಿನ ಎಸೆಸೆಲ್ಸಿ ಪರೀಕ್ಷಾ ಕೇಂದ್ರ, ಪರೀಕ್ಷಾ ಸಿಬ್ಬಂದಿ ಹೊರತುಪಡಿಸಿ ಜಿಲ್ಲೆ ಶಾಲಾ-ಕಾಲೇಜುಗಳಿಗೆ ಹಾಗೂ ಎಲ್ಲ ಸರಕಾರಿ ಕಚೇರಿಗೆ ನಾಳೆ(ಮಾ.23)ರಜೆ ಘೋಷಣೆ ಮಾಡಲಾಗಿದೆ.

ಮೃತರ ಗೌರವಾರ್ಥ ಮಾ.22ರಿಂದ 24ರ ವರೆಗೆ ಮೂರು ದಿನಗಳ ಕಾಲ ರಾಜ್ಯಾದ್ಯಂತ ಶೋಕ ಆಚರಿಸಲಾಗುವುದು. ಈ ವೇಳೆ ಯಾವುದೇ ಅಧಿಕೃತ ಮನರಂಜನಾ ಕಾರ್ಯಕ್ರಮಗಳು ಇರುವುದಿಲ್ಲ. ಇದೇ ವೇಳೆ ಸರಕಾರಿ ಕಟ್ಟಡಗಳ ಮೇಲೆ ರಾಷ್ಟ್ರಧ್ವಜವನ್ನು ಅರ್ಧಮಟ್ಟಕ್ಕೆ ಹಾರಿಸಲಾಗುವುದು.

ಅಲ್ಲದೆ, ಪೌರಾಡಳಿತ ಸಚಿವ ಸಿ.ಎಸ್.ಶಿವಳ್ಳಿಯವರ ಅಂತ್ಯಕ್ರಿಯೆಯನ್ನು ಸಕಲ ಸರಕಾರಿ ಗೌರವಗಳೊಂದಿಗೆ ನೆರವೇರಿಸಲಾಗುವುದು ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ(ಶಿಷ್ಟಾಚಾರ) ಶುಕ್ರವಾರ ಆದೇಶ ಹೊರಡಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News