ವಿವಿಧ ಅಪರಾಧ ಕೃತ್ಯ: 22 ಮಂದಿಯ ಸೆರೆ, 61 ಲಕ್ಷ ಮೌಲ್ಯದ ಮಾಲು ಜಪ್ತಿ

Update: 2019-03-22 14:56 GMT

ಬೆಂಗಳೂರು, ಮಾ.22: ಮನೆಗಳ್ಳತನ, ಮಾದಕ ವಸ್ತು ಮಾರಾಟ ಸೇರಿದಂತೆ ಇನ್ನಿತರ ಅಪರಾಧ ಕೃತ್ಯಗಳಲ್ಲಿ ತೊಡಗಿದ್ದ ಆರೋದಪಡಿ 22 ಮಂದಿ ಆರೋಪಿಗಳನ್ನು ಬಂಧಿಸಿರುವ ನಗರದ ದಕ್ಷಿಣ ವಿಭಾಗದ ಠಾಣಾ ಪೊಲೀಸರು, 64 ಪ್ರಕರಣ ಬೇಧಿಸಿ, 61 ಲಕ್ಷ ರೂ. ಮೌಲ್ಯದ ಮಾಲು ಜಪ್ತಿ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.

ಈ 22 ಜನ ಆರೋಪಿಗಳಿಂದ ಬಂಧನದಿಂದ ಕುಮಾರಸ್ವಾಮಿ ಲೇಔಟ್‌ನಲ್ಲಿ 28 ಪ್ರಕರಣ, ಪುಟ್ಟೇನಹಳ್ಳಿ 10, ತಲಘಟ್ಟಪುರ 17, ಕೋಣನಕುಂಟೆ 5, ಸುಬ್ರಮಣ್ಯಪುರ ಪೊಲೀಸ್ ಠಾಣಾ ವ್ಯಾಪ್ತಿಯ 4 ಪ್ರಕರಣಗಳು ಪತ್ತೆಯಾಗಿವೆ. ಆರೋಪಿಗಳಿಂದ 500 ಗ್ರಾಂ ಚಿನ್ನಾಭರಣ, 5 ಕೆಜಿ ಬೆಳ್ಳಿ, 1 ಸ್ಕಾರ್ಪಿಯೋ ಕಾರು, 1 ಆಟೊ, 48 ಬೈಕ್, 1 ಕೆಜಿ ಗಾಂಜಾ ಹಾಗೂ 1.92 ಲಕ್ಷ ರೂ. ನಗದು ಹಣ ಸೇರಿದಂತೆ ಒಟ್ಟು 61 ಲಕ್ಷ ರೂ. ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ದಕ್ಷಿಣ ವಿಭಾಗದ ಡಿಸಿಪಿ ಅಣ್ಣಾಮಲೈ ಹೇಳಿದರು.

ಇತ್ತೀಚೆಗೆ ದಕ್ಷಿಣ ವಿಭಾಗದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮನೆ ಮುಂದೆ ನಿಲ್ಲಿಸಿದ್ದ ವಾಹನಗಳ ಕಳ್ಳತನ ಪ್ರಕರಣಗಳು ಹೆಚ್ಚಾಗಿದ್ದವು. ಆರೋಪಿಗಳು ವಾಹನ ಕಳ್ಳತನ ಮಾಡುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದವು. ಇದನ್ನು ಆಧರಿಸಿ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಸೆರೆ ಹಿಡಿಯಲಾಗಿದೆ ಎಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News